ಬಂದ್…ಬಂದ್…ಅಗತ್ಯ ಸೇವೆ ಹೊರತು ಪಡಿಸಿ ಎಲ್ಲವೂ ಬಂದ್ | ಸರಕಾರದಿಂದ ಪರಿಷ್ಕೃತ ಆದೇಶ
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಅಗತ್ಯ ಸೇವೆ ಹೊರತುಪಡಿಸಿ ಅಂಗಡಿ ಮುಂಗಟ್ಟುಗಳ ಬಂದ್ ಗೆ ಸೂಚಿಸಿದೆ.
ಅಗತ್ಯ ಸೇವೆ ಹೊರತುಪಡಿಸಿ ಮೇ 4ರವರೆಗೆ ಎಲ್ಲಾ ಸೇವೆಗಳು ಬಂದ್ ಆಗಲಿವೆ ಎಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪೊಲೀಸರು, ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡುತ್ತಿದ್ದಾರೆ.
ಔಷಧ ಅಂಗಡಿ, ದಿನಸಿ, ಹಣ್ಣು-ತರಕಾರಿ, ಸಲೂನ್ ಬ್ಯೂಟಿಪಾರ್ಲರ್, ವೈನ್ ಶಾಪ್ ಹೊರತುಪಡಿಸಿ ಉಳಿದೆಲ್ಲ ಅಂಗಡಿ, ಶಾಪಿಂಗ್ ಕಾಂಪ್ಲೆಕ್ಸ್, ಮಾಲ್ ಸೇರಿದಂತೆ ಎಲ್ಲಾ ಸೇವೆಗಳನ್ನು ಬಂದ್ ಗೆ ಸರಕಾರ ಸೂಚಿಸಿದೆ.