ಮೇರೆ ಮೀರಿದ ಕೊರೋನಾ ಮನೆ ಬಿಟ್ಟು ಹೊರಗೆ ಬರಬೇಡಿ: ರಾಜ್ಯದ ಜನತೆಗೆ ಮುಖ್ಯಮಂತ್ರಿ ಮನವಿ
ರಾಜ್ಯದಲ್ಲಿ ದಿನೇ ದಿನೇ ಕೊರೋನ ಸೋಂಕು ಏರುಗತಿಯಲ್ಲಿ ಪ್ರಸರಣವಾಗುತ್ತಿದ್ದು,ಒಂದು ಮನೆಯೊಂದರಲ್ಕೇ ಮೂರರಿಂದ ನಾಲ್ಕು ಜನರಲ್ಲಿ ಕೊರೋನ ಕಾಣಿಸಿಕೊಳ್ಳುತ್ತಿದ್ದು, ಪ್ರಧಾನ ಮಂತ್ರಿ ಸೂಚಿಸಿದ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸ್ ಮಾಡಿಕೊಳ್ಳುವುದು, ಅಂತರ ಕಾಯ್ದುಕೊಳ್ಳುವುದು ಬಿಟ್ಟು ಕೊರೋನ ತಡೆಗೆ ಬೇರೆ ಯಾವ ಮಾರ್ಗ ಇಲ್ಲ, ರಾಜ್ಯದ ಜನರಲ್ಲಿ ಕೈ ಜೋಡಿಸಿ ಪ್ರಾರ್ಥಿಸುತ್ತೇನೆ,ದಯಮಾಡಿ ಅನಗತ್ಯವಾಗಿ ಮನೆ ಬಿಟ್ಟು ಹೊರಗೆ ಬರಬೇಡಿ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕೊರೋನ ಸೋಂಕಿಗೆ ಒಳಗಾಗಿದ್ದ ಸಿಎಂ ಯಡಿಯೂರಪ್ಪ ಅವರು ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಾತನಾಡಿದ್ದಾರೆ.
ಕೊರೋನ ಕಂಟ್ರೋಲ್ ಮಾಡೋಕೆ ಆಗದ ಸ್ಥಿತಿಗೆ ಬಂದು ತಲುಪಿದ್ದೇವೆ. ಇನ್ನಾದರೂ ಅನಗತ್ಯವಾಗಿ ಮನೆ ಬಿಟ್ಟು ಹೊರಗೆ ಬರಬೇಡಿ. ಈಗಾಗಲೇ ಸಾಕಷ್ಟು ಬಿಗಿ ಕ್ರಮ ತೆಗೆದುಕೊಂಡಿದ್ದೇವೆ. ಅನಗತ್ಯವಾಗಿ ಪೊಲೀಸರು ದಂಡ ಹಾಕಿ ಬಿಗಿ ಪರಿಸ್ಥಿತಿ ನಿರ್ಮಾಣ ಆಗೋದಕ್ಕೆ ಅವಕಾಶ ಮಾಡಿ ಕೊಡದೇ ಸಾರ್ವಜನಿಕರ ಹಿತ ದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆ.
ನಾನು ಆರೋಗ್ಯವಾಗಿ ಬಂದಿದ್ದೇನೆ. ಇಂದು ಸಚಿವ ಸಂಪುಟದ ಸಹೋದ್ಯೋಗಿಗಳ ಸಭೆಯನ್ನೂ ಕರೆದಿದ್ದೇನೆ. ಕಳೆದ ನಾಲ್ಕು ದಿನಗಳಿಂದ ಎಲ್ಲಾ ಸಚಿವರೊಂದಿಗೆ ಸತತ ಸಂಪರ್ಕದಲ್ಲಿ ಇದ್ದೇನೆ. ಇಂದು ಎಲ್ಲರೂ ಕೂತು ಚರ್ಚೆ ಮಾಡಿ ವಾಸ್ತವತೆಯನ್ನು ತಿಳಿದುಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು.