ಕೋವಿಡ್ ಪ್ರಕರಣಗಳು ಹೆಚ್ಚಳ | ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದ ಕೋಲಾರ ಜಿಲ್ಲಾಡಳಿತ
ಕೋಲಾರ ಜಿಲ್ಲೆಯ ಕೋಲಾರ ನಗರದಲ್ಲಿ ಕೋವಿಡ್ ನಿಯಂತ್ರಿಸಲು ಪೊಲೀಸರು ಗುರುವಾರ ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುತ್ತಿದ್ದಾರೆ.
ನಗರದ ಹೊರವಲಯದ ಗ್ರಾಮಾಂತರ ಪ್ರದೇಶದ ಹಲವಾರು ಗ್ರಾಮಗಳಲ್ಲಿ ಕೋವಿಡ್ ಪ್ರಕರಣಗಳು ಗಣನೀಯ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾಡಳಿತ ವ್ಯಾಪಾರ ವಹಿವಾಟನ್ನು ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ಕೋಲಾರ ಜಿಲ್ಲಾ ಕೇಂದ್ರ ಸೇರಿದಂತೆ ಎಲ್ಲಾ ತಾಲೂಕಿನ ಕೇಂದ್ರಗಳು ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್-19 ಕೈಮೀರಿ ಹರಡುತ್ತಿದೆ.
ಕೋಲಾರ ನಗರ ಠಾಣೆ ಮತ್ತು ಗಲ್ ಪೇಟೆ ಠಾಣೆ ವ್ಯಾಪ್ತಿಯಲ್ಲಿನ ಅಂಗಡಿಗಳನ್ನು ಪೊಲೀಸರು ಮುಚ್ಚಿಸಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಗುರುವಾರ ಕೊರೊನಾ ಸೋಂಕಿತರ ಸಕ್ರಿಯ ಪ್ರಕರಣಗಳು ಸಾವಿರ ಗಡಿ ದಾಟಿದೆ.
ಬುಧವಾರ ರಾತ್ರಿಯ ಮೊದಲ ದಿನದ ಕರ್ಫ್ಯೂ ನಂತರ ಅಂಗಡಿಗಳನ್ನು ತೆರೆಯಲು ಬಂದ ಮಾಲೀಕರಿಗೆ ಪೊಲೀಸರು ಮುಚ್ಚಿಸುವ ಶಾಕ್ ನೀಡಿದರು. ಜಿಲ್ಲಾಡಳಿತ ಕ್ರಮಕ್ಕೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.