ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿದ್ದ ಇನ್ನೊಬ್ಬ ಬಾಲಕನೂ ಮೃತ್ಯು

ಮೂಲ್ಕಿಯ ಬೊಳ್ಳೂರು ಇಂದಿರಾನಗರದಲ್ಲಿ ಆಟವಾಡುತ್ತಿದ್ದ ಪುಟ್ಟ ಮಕ್ಕಳು ಸಿಡಿಲಿನ ಅಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ಓರ್ವ ಬಾಲಕ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಸಾವನ್ನಪ್ಪಿದ್ದು,ಇನ್ನೋರ್ವನೂ ಇಂದು ಮೃತಪಟ್ಟ ಘಟನೆ ನಡೆದಿದೆ.

ಮಂಗಳವಾರದಂದು ಇಂದಿರಾನಗರದ ಬೊಳ್ಳೂರು ಮಸೀದಿ ಹಿಂಭಾಗದ ಮನೆಯ ಖಾಸಗಿ ಜಮೀನಿನಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎಂಬುವರ ಎರಡನೇ ಪುತ್ರ ನಿಹಾನ್ (೫) , ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತೇಶ್ (೬) ಸಿಡಿಲು ಬಡಿದು ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದೀಗ ಇಬ್ಬರೂ ಮೃತಪಟ್ಟಿದ್ದು,ಊರಿನ ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಇಲಾಖಾಧಿಕಾರಿಗಳು ಮೃತರ ಮನೆಗೆ ಬೇಟಿ ನೀಡಿ ಸಾಂತ್ವನ ಹೇಳಿದ್ದು,ಇಲಾಖೆಯಿಂದ ಪರಿಹಾರ ದೊರಕಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Leave A Reply

Your email address will not be published.