ಮಣಿಪಾಲ : ಹೋಟೆಲ್ ಕಟ್ಟಡದಲ್ಲಿ ಬೆಂಕಿ | ಶಾರ್ಟ್ ಸರ್ಕ್ಯೂಟ್‌ ನಿಂದ ಅವಘಡ

    

ಉಡುಪಿ ಜಿಲ್ಲೆಯ ಮಣಿಪಾಲದ ಆಶ್ಲೇಶ್ ಹೋಟೆಲ್ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಘಟನೆ ಗುರುವಾರ ರಾತ್ರಿ ನಡೆದ ಬಗ್ಗೆ ವರದಿಯಾಗಿದೆ.

ಈ ಕಟ್ಟಡದಲ್ಲಿದ್ದ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳದಲ್ಲಿ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ.

ಮುಂಜಾಗ್ರತ ಕ್ರಮವಾಗಿ ಪರಿಸರದಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗಿದೆ.

Leave A Reply

Your email address will not be published.