ಬಜಪೆ | ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ

ಬಜಪೆ : ಬಜೆಪೆ ಸಮೀಪದ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.

ಹೊಸದಾಗಿ ನಿರ್ಮಾಣಗೊಂಡ ಕಂಪೆನಿ ಇದಾಗಿದ್ದು, ಇಲ್ಲಿನ ಕೆಮಿಕಲ್ಸ್ ಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕ್ಯಾಟಸೆಂತ್ ಫ್ಯಾಕ್ಟರಿಯ 4 ನೇ ಪ್ಲ್ಯಾಂಟ್ ನ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇಲ್ಲಿ ವೆಲ್ಡಿಂಗ್ ಕಾರ್ಯ ನಡೆಯುತಿತ್ತು ಎನ್ನಲಾಗಿದೆ. ಬೆಂಕಿಯಿಂದ ಸುರತ್ಕಲ್ ಭಾಗದಲ್ಲಿ ದಟ್ಟ ಹೊಗೆ ಆವರಿಸಿದೆ. ಸುರತ್ಕಲ್ ಎಮ್ ಆರ್ ಪಿಎಲ್ ಅಗ್ನಿಶಾಮಕ ದಳದಿಂದ ಕಾರ್ಯಚರಣೆ ನಡೆಯುತ್ತಿದೆ. ಸದ್ಯ ಯಾವುದೇ ಪ್ರಾಣಹಾನಿಯಾದ ವರದಿಯಾಗಿಲ್ಲ.

Leave A Reply

Your email address will not be published.