ಮುಂದುವರೆದ ಕೊರೋನಾರ್ಭಟ : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3, 46, 786 ಮಂದಿಗೆ ತಗುಲಿದ ಸೋಂಕು | 2624 ಸೋಂಕಿತರ ಸಾವು

ದೇಶದಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 3,46,786 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,66,10,481 ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 2,624 ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾಗೆ ಇದುವರೆಗೆ 1,89,544 ಮಂದಿ ಪ್ರಾಣಕಳೆದುಕೊಂಡಿದ್ದಾರೆ.

ಕೊರೋನಾ ಸೋಂಕಿತರಾಗಿದ್ದ 1,38,67,997 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 25,52,940 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಕೊರೋನಾ ಸೋಂಕಿನಿಂದ 2,19,838 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 13,83,79,832 ಮಂದಿಗೆ ಲಸಿಕೆ ನೀಡಲಾಗಿದೆ,

Leave A Reply

Your email address will not be published.