ವೀಕೆಂಡ್ ಕರ್ಫ್ಯೂ, ರಾತ್ರಿ ಕರ್ಫ್ಯೂ ನಿಯಮ ಕಡ್ಡಾಯವಾಗಿ ಪಾಲಿಸಿ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ
ದ.ಕ.ಜಿಲ್ಲೆಯಲ್ಲಿ ಮೇ 4ರವರಗೆ ರಾತ್ರಿ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂಗೆ ಸಂಬಂಧಿಸಿ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ಆದೇಶಿಸಲಾಗಿದೆ.
ವಾರಾಂತ್ಯದ ಕರ್ಫ್ಯೂ ಸಂರ್ಭದಲ್ಲಿ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಆದರೂ ನಿರ್ಮಾಣ ಕೆಲಸ ನಡೆಯುವ ಸ್ಥಳದಲ್ಲೇ ಕಾರ್ಮಿಕರು ಲಭ್ಯವಿದ್ದು, ಹೊರಗಿನ ಪ್ರದೇಶದಿಂದ ಕಾರ್ಮಿಕರನ್ನು ಕರೆತರುವ ಅಗತ್ಯವಿಲ್ಲದೆ ನಿರ್ಮಾಣ ಕಾರ್ಯಗಳನ್ನು ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.