Breaking News | ಇನ್ನು ಅಂತ್ಯಸಂಸ್ಕಾರಕ್ಕೆ ಕೇವಲ 5 ಜನ ಮಾತ್ರ | ರಾಜ್ಯ ಸರಕಾರದಿಂದ ಕಠಿಣ ನಿಯಮಾವಳಿ ಜಾರಿ !
ಕರ್ನಾಟಕ ರಾಜ್ಯದಲ್ಲಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕೇವಲ ಐದು ಮಂದಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರ ಭಾನುವಾರ ಹೊಸ ಮಾರ್ಗಸೂಚಿ ಹೊರಡಿಸಿದೆ.
ಕೊರೋನಾ ಮಾರ್ಗಸೂಚಿ ಕಡ್ಡಾಯ ಪಾಲಿಸಿದ ಮೇಲೆ ಮಾತ್ರ ಶವಸಂಸ್ಕಾರದಲ್ಲಿ ಭಾಗವಹಿಸಬಹುದು.
ಕೇವಲ ಐವರಿಗೆ ಮಾತ್ರ ಅನುಮತಿ ನೀಡಲಾಗುವುದು ಎಂದು ಸರ್ಕಾರ ಹೇಳಿದೆ.
ಕೊರೋನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ಗೌರವಯುತವಾಗಿ ನಡೆಯುತ್ತಿಲ್ಲ ಎಂಬ ಆರೋಪದ ಮಧ್ಯೆಯೇ ಸರ್ಕಾರದ ಹೊಸ ನಿಯಮ ಜಾರಿಗೆ ಬಂದಿದೆ.
ಇದು ಸಾರ್ವಜನಿಕರಿಗೆ ಒಂದು ದೊಡ್ಡ ಎಚ್ಚರಿಕೆಯ ಗಂಟೆಯಾಗಿದೆ. ಇನ್ನಾದರೂ ಕಟ್ಟುನಿಟ್ಟಾಗಿ ಕೋರೋನಾ ನಿಯಮಾವಳಿಗಳನ್ನು ಪಾಲಿಸಿ ಕೋರೋಣ ಹರಡುವುದನ್ನು ತಡೆಗಟ್ಟಬೇಕು. ಇಲ್ಲದೆ ಹೋದರೆ ನಮ್ಮ ಸ್ವಂತ ಕುಟುಂಬದ ವ್ಯಕ್ತಿ ತೀರಿಕೊಂಡಾಗಲೂ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಆಗುವುದಿಲ್ಲ.