ಮಹಾಮಾರಿ ಕೊರೋನಾಗೆ ದ.ಕ. ಜಿಲ್ಲೆ ತತ್ತರ | ಇಂದು ಮತ್ತಷ್ಟು ಏರಿಕೆಯಾದ ಸೋಂಕಿತರ ಸಂಖ್ಯೆ

ದ. ಕ. ಜಿಲ್ಲೆಯಲ್ಲಿ ಭಾನುವಾರದಂದು ಕೊರೋನಾ ಮತ್ತಷ್ಟು ಆರ್ಭಟಿಸಿದೆ. ಇಂದು ಒಂದೇ ದಿನ ಬರೋಬ್ಬರಿ 564 ಕೋವಿಡ್ ಪ್ರಕರಣಗಳು ಕಾಣಿಸಿಕೊಂಡಿವೆ. ಜಿಲ್ಲೆಯಲ್ಲಿ ಇಂದು ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 3975 ಸಕ್ರಿಯ ಪ್ರಕರಣಗಳಿದ್ದು, ಇಂದು 165 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಕೊರೋನಾ ಹೇಗಿದೆ..?

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 34,804 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 143 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 13,39,201ಕ್ಕೆ ಏರಿಕೆಯಾಗಿದೆ.
ಇನ್ನು ಒಟ್ಟು ಸಾವನ್ನಪ್ಪಿದವರ ಸಂಖ್ಯೆ 14,426ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ 2,62,162 ಸಕ್ರಿಯ ಪ್ರಕರಣಗಳಿದ್ದು, ನಿಗದಿತ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಂಕಿತರ ಪೈಕಿ ಈವರೆಗೆ 10,62,594 ಮಂದಿ‌ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Leave A Reply

Your email address will not be published.