Ad Widget

BIG SHOCKING | ರಾಜ್ಯದಲ್ಲಿ 3 ಲಕ್ಷಕ್ಕಿಂತ ಅಧಿಕ ಆಕ್ಟಿವ್ ಕೇಸ್, 180 ಮಂದಿ ಸಾವು, ಒಟ್ಟು 14 ಲಕ್ಷ ದಾಟಿದ ಸೋಂಕಿತರ ಸಂಖ್ಯೆ!

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 31,830 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇವತ್ತು ಒಂದೇ ದಿನ 180 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 14,00,775 ಕ್ಕೆ ಏರಿಕೆಯಾಗಿದ್ದು, 2063 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೆ 14,807 ಸೋಂಕಿತರು ಮೃತಪಟ್ಟಿದ್ದಾರೆ. ಇಂದು 10,793 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 10,84,050 ಮಂದಿ ಗುಣಮುಖರಾಗಿ ಡಿಸ್ಟಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ ಬರೋಬ್ಬರಿ 3,01,99 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ ಇಂದು ಕೂಡ ಕೊರೋನಾ ಸ್ಪೋಟವಾಗಿದ್ದು, 17,550 ಜನರಿಗೆ ಸೋಂಕು ತಗಲಿದೆ. 97 ಸೋಂಕಿತರು ಸಾವನ್ನಪ್ಪಿದ್ದಾರೆ. 2,06,223 ಸಕ್ರಿಯ ಪ್ರಕರಣಗಳಿವೆ.

Ad Widget Ad Widget Ad Widget
Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: