ಚಿಕಿತ್ಸೆ ನೀಡದೇ ಶವ ನೀಡಲು 4 ಲಕ್ಷಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ | ದುಡ್ಡು ಕೊಡಲಾರದೆ ಪತಿಯ ಶವವನ್ನು ಆಸ್ಪತ್ರೆಯಲ್ಲಿ ಬಿಟ್ಟು ನಡೆದಳು !!

ಬೆಂಗಳೂರು ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆ ಬೆಂಗಳೂರು ವಾಸಿಗಳನ್ನು ಹಿಂಡಿ ಹಿಪ್ಪೆ ಮಾಡಿ ಹಾಕುತ್ತಿದೆ. ಒಂದೆಡೆ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಪರದಾಡುತ್ತಿದ್ದರೆ, ಇನ್ನೊಂದೆಡೆ ಖಾಸಗಿ ಆಸ್ಪತ್ರೆಗಳ ಧನದಾಹಕ್ಕೆ ಜನ ನಲುಗಿ ಹೋಗಿದ್ದಾರೆ.

ಇಂತಹ ಘಟನೆ ಎಲ್ಲೂ ನಡೆಯಲು ಸಾಧ್ಯ ಇಲ್ಲ. ಅಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಿಲ್ ಕಟ್ಟಲು ಆಗದೇ ಪತಿಯ ಮೃತದೇಹವನ್ನೇ ಪತ್ನಿ ಬಿಟ್ಟು ಹೋದ ಪ್ರಸಂಗ ನಡೆದಿದೆ.

ಕಳೆದ ನಾಲ್ಕು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿಯೇ ಮೃತದೇಹವಿದೆ. ಆಸ್ಪತ್ರೆ ಸಿಬ್ಬಂದಿ 4 ಲಕ್ಷ ಬಿಲ್ ಕಟ್ಟುವಂತೆ ಹೇಳಿದ್ದಾರೆ. ಇದರಿಂದ ದಿಕ್ಕು ತೋಚದ ಮಹಿಳೆ, 4 ಲಕ್ಷ ಹಣ ಇಲ್ಲ, ನೀವೇ ಅಂತ್ಯಸಂಸ್ಕಾರ ಮಾಡಿ ಎಂದು ಹೇಳಿ ಊರಿಗೆ ತೆರಳಿದ್ದಾರೆ.

ಮೃತರು 39 ವರ್ಷ ವಯಸ್ಸಿನವರಾಗಿದ್ದು, ಮೂಲತಃ ವಿಜಯಪುರದವರಾಗಿದ್ದಾರೆ. ಐದು ವರ್ಷದಿಂದ ಬೆಂಗಳೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ನನ್ನ ತಂದೆಗೆ 4 ದಿನಗಳಿಂದ ಹುಷಾರು ಇರಲಿಲ್ಲ. ಸ್ವಲ್ಪ ಜ್ವರ ಕೆಮ್ಮು ಇತ್ತು. ನಂತರ ಕೊರೊನಾ ಚೆಕ್ ಮಾಡಿಸಿದೆವು. ಆಗ ಕೊರೊನಾ ಪಾಸಿಟಿವ್ ಬಂತು. ಬಿಬಿಎಂಪಿಯವರಿಗೆ ಕಾಲ್ ಮಾಡಿದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಾವು ಕಣ್ವ ಆಸ್ಪತ್ರೆಗೆ ಅಡ್ಮಿಟ್ ಮಾಡಿಸಿದೆವು. ಮೊದಲಿಗೆ 50 ಸಾವಿರ ಅಡ್ವಾನ್ಸ್ ಹಣ ಕಟ್ಟಿ ಅಂದ್ರು. ನಮ್ಮ ಬಳಿ ಅಷ್ಟು ಹಣ ಇರಲಿಲ್ಲ. ಹಾಗಾಗಿ 20 ಸಾವಿರ ಕಟ್ಟಿದ್ವಿ. ಕಣ್ವ ಆಸ್ಪತ್ರೆಯಲ್ಲಿ ಯಾವುದೇ ರೀತಿಯಲ್ಲಿ ಚಿಕಿತ್ಸೆ ನೀಡಲಿಲ್ಲ. ಇತ್ತ ತಂದೆ, ನನ್ನನ್ನ ಈ ಆಸ್ಪತ್ರೆಯಲ್ಲಿ ಇರಿಸಿದ್ರೆ ಸಾಯಿಸ್ತಾರೆ. ಬೇರೆ ಆಸ್ಪತ್ರೆಗೆ ಸೇರಿಸು ಎಂದು ವಿಡಿಯೋ ಕಾಲ್‍ ಮಾಡಿ ಹೇಳಿದರು. ಮೊದಲಿಗೆ ಶೇ.30ರಷ್ಟು ಸೋಂಕುಮಾತ್ರ ಇದೆ. ಬೇಗ ಗುಣಮುಖ ಆಗಿದ್ದಾರೆ ಅಂದರು, ಆದಾಗಿ ಎರಡು ದಿನಗಳ ನಂತರ ಅಪ್ಪ ತೀರಿಕೊಂಡರ ಎಂದು ಸೋಂಕಿತನ ಮಗಳು ಗಂಭೀರ ಆರೋಪ ಮಾಡಿದ್ದಾರೆ.

Leave A Reply

Your email address will not be published.