ಉಪ್ಪಿನಂಗಡಿ ಎಸ್ಬಿಐ ಎಟಿಎಂ ಕಳ್ಳತನಕ್ಕೆ ಯತ್ನ| ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಭೇಟಿ

ಮಂಗಳೂರು:ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದಾರೆ. ಇಂದು ಮುಂಜಾನೆ ವೇಳೆ ಕಳ್ಳರು ಇಲ್ಲಿನ ಎಸ್ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ ಗಾನಕುಮಾರ್, ಇನ್ಸ್ಪೆಕ್ಟರ್ ಉಮೇಶ್ ಉಪ್ಪಳಿಕೇ ಸೇರಿದಂತೆ ಉಪ್ಪಿನಂಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ಮುಂದುವರಿಸಿದ್ದಾರೆ.

Leave A Reply

Your email address will not be published.