ರಿಸರ್ವ್ ಬ್ಯಾಂಕ್ ನಿಂದ ಮತ್ತೊಮ್ಮೆ ಸಾಲದ ಕಂತು ಮುಂದೂಡುವ ಸಾಧ್ಯತೆ !
ನವದೆಹಲಿ : ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಿಸಿವೆ. ಇದನ್ನು ಗಮನಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ಸಾಲದ ಕಂತು ಮುಂದೂಡಿಕೆ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಿಸಿವೆ. ಹೀಗಾಗಿ ಲೋನ್ ಮೊರಾಟೋರಿಯಂ ನಂತಹ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆ ಇದ್ದು, ಮತ್ತೊಮ್ಮೆ ಸಾಲದ ಕಂತು ಮುಂದೂಡಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಇನ್ನು ಕಳೆದ ವರ್ಷ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಎದುರಾಗಿತ್ತು. ಇದರಿಂದಾಗಿ ಆರ್ ಬಿಐ ಮತ್ತು ಕೇಂದ್ರ ಸರ್ಕಾರ 6 ತಿಂಗಳ ಲೋನ್ ಮೊರಾಟೋರಿಯಂ ಘೋಷಿಸಿತ್ತು. ನಂತರ ಸಾಲ ಮರುರಚನೆಗೆ ಅವಕಾಶ ಮಾಡಿಕೊಟ್ಟಿತ್ತು. ಇದೀಗ ಮತ್ತೊಮ್ಮೆ ಕೊರೊನಾ ವೈರಸ್ ಅಬ್ಬರಿಸುತ್ತಿದ್ದು, ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ. ಇದರಿಂದಾಗಿ ಮತ್ತೊಮ್ಮೆ ಲೋನ್ ಮೊರಾಟೋರಿಯಂ ಘೋಷಣೆಯಾಗಬಹುದು ಎಂದು ಅಭಿಪ್ರಾಯಿಸಲಾಗಿದೆ.