Ad Widget

ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳನ್ನು ಇಂದಿನಿಂದ ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿ

ರಾಜ್ಯದಲ್ಲಿ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ಮಳಿಗೆಗಳನ್ನು ಇಂದು ಶುಕ್ರವಾರದಿಂದ (ಏ.30) ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ.

ಈ ಕುರಿತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಕರ್ಪ್ಯೂ ಹಿನ್ನೆಲೆಯಲ್ಲಿ ಬೆಳಿಗ್ಗೆ 6-10 ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಹಾಲು ಮಾರಾಟ ಮಾಡಲು ಸಮಸ್ಯೆಯಾಗುತ್ತಿದ್ದು, ಗ್ರಾಹಕರು ಮತ್ತು ಹಾಲು ಸರಬರಾಜು ಮಾಡಲು ಕಷ್ಟ ಆಗುತ್ತಿತ್ತು.

ಆದುದರಿಂದ ಸಂಜೆ 8 ಗಂಟೆವರೆಗೂ ನಂದಿನಿ ಹಾಲಿನ ಮಳಿಗೆಗಳನ್ನು ತೆರೆದಿಡಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಇಂದಿನಿಂದ ಬೆಳಿಗ್ಗೆ 6 ರಿಂದ ರಾತ್ರಿ 8 ರವರೆಗೆ ನಂದಿನಿ ಮಳಿಗೆಗಳು ತೆರೆದಿರಲಿವೆ.

Ad Widget Ad Widget Ad Widget
Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: