ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಲಾಕ್ ಡೌನ್ ಉಲ್ಲಂಘನೆ | ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು

ಮಂಗಳೂರು: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಲ್ಲಿ ಒಂದಾದ ವಳಚ್ಚಿಲ್ ನ ಎಕ್ಸ್ ಪರ್ಟ್ ಕಾಲೇಜು ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಕೋವಿಡ್ ನಿಯಮದ ಪ್ರಕಾರ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಮಾಡಿಸುವಂತಿಲ್ಲ, ವಿದ್ಯಾರ್ಥಿಗಳನ್ನು ಗುಂಪು ಕೂಡಿಸುವಂತಿಲ್ಲ ಎಂದು ಟಫ್ ರೂಲ್ಸ್ ಮಾಡಿದ್ದರೂ, ಶೈಕ್ಷಣಿಕ ಸಂಸ್ಥೆಯು ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದೇ ಎಪ್ರಿಲ್ 19 ರಂದು ಸುಮಾರು 30 ವಿದ್ಯಾರ್ಥಿಗಳನ್ನು ಕಾಲೇಜಿನಲ್ಲಿಯೇ ಉಳಿಸಿಕೋಂಡಿದ್ದು  ಕೋವಿಡ್ ಸಾಂಕ್ರಾಮಿಕ ರೋಗ ಹರಡಲು ಕಾರಣರಾಗಿದ್ದಾರೆ.ವಿದ್ಯಾರ್ಥಿಗಳನ್ನು ಪೋಷಕರು ತಮ್ಮ ಊರಿಗೆ ಕರೆದುಕೊಂಡು ಹೋಗಲು ದೂರದ ಊರಿನಿಂದ ಬಂದಿದ್ದರು. ಆದರೆ ಶಿಕ್ಷಣ ಸಂಸ್ಥೆಯವರು ವಿದ್ಯಾರ್ಥಿಗಳನ್ನು ಪೋಷಕರೊಂದಿಗೆ ಕಳುಹಿಸದೆ,
ಕೋವಿಡ್ ನಿಯಮ ಉಲ್ಲಂಘಿಸಿ ತಮ್ಮ ಶೈಕ್ಷಣಿಕ ಚಟುವಟಿಕೆಯನ್ನು ಎಕ್ಸ್ ಪರ್ಟ್ ವಿದ್ಯಾಂಸ್ಥೆಯು  ನಡೆಸಿರುವುದು ಬೆಳಕಿಗೆ ಬಂದಿದೆ

ಹಾಗಾಗಿ ವಿದ್ಯಾಸಂಸ್ಥೆಯ ಮುಖ್ಯಸ್ಥ ನರೇಂದ್ರ ನಾಯಕ್ ಮತ್ತು ಆಡಳಿತ ಮಂಡಳಿ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ 5(1), 5(4) ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

Leave A Reply

Your email address will not be published.