ಸ್ಮಶಾನದಲ್ಲಿದ್ದ ಅರೆಬೆಂದ ಕೊರೊನಾ ಸೋಂಕಿತನ ಮೃತದೇಹ ತಿಂದ ವ್ಯಕ್ತಿ | ಈ ಘಟನೆ ನಡೆದದ್ದು ಎಲ್ಲಿ ಗೊತ್ತಾ?

 

ದೇಶವೇ ಬೆಚ್ಚಿಬೀಳಿಸುವಂತಹ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದ್ದು, ವ್ಯಕ್ತಿಯೊಬ್ಬ ಅರೆಬೆಂದ ಕೊರೊನಾ ರೋಗಿಯ ಶವವನ್ನೇ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬುಧವಾರ ಬೆಳಗ್ಗೆ ಸತಾರಾ ಜಿಲ್ಲೆಯ ಕೊಲಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸ್ಮಶಾನದಲ್ಲಿ ವ್ಯಕ್ತಿಯೊಬ್ಬ ಅಡ್ಡಾಡುವುದನ್ನು ಸ್ಥಳೀಯರು ಗಮನಿಸಿದ್ದಾರೆ.

ನೋಡ ನೋಡುತ್ತಿದ್ದಂತೆ ಆ ವ್ಯಕ್ತಿ ಅರೆಬೆಂದ ಕೊರೊನಾ ಸೋಂಕಿತ ಶವದ ಮಾಂಸವನ್ನು ತಿನ್ನುವುದನ್ನು ನೋಡಿ ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.

ಈ ಮಾಹಿತಿಯನ್ನು ಸ್ಥಳೀಯರು ಹತ್ತಿರದ ಪೊಲೀಸ್​ ಠಾಣೆಗೆ ತಿಳಿಸಿದಾಗ ಪೊಲೀಸರು ಸಹ ಒಂದು ಕ್ಷಣ ನಿಬ್ಬೆರಾಗಿದ್ದಾರೆ.

ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಈ ವೇಳೆ ಗ್ರಾಮಸ್ಥರು ಕೂಗಾಡುವುದನ್ನು ನೋಡಿ ಆ ವ್ಯಕ್ತಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.ನಂತರ ಆತನನ್ನು ಬೆನ್ನಟ್ಟಿದ ಪೊಲೀಸರು ಬಂಧಿಸಿ ವಶಕ್ಕೆ ಪಡೆದುಕೊಂಡರು.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಸದ್ಯ ಆತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಫಲ್ತಾನ್​ ಮುನ್ಸಿಪಾಲ್​ ಕಾರ್ಪೊರೇಷನ್​ ಮುಖ್ಯಸ್ಥ ಪ್ರಸಾದ್​ ಕಟ್ಕರ್​, ಆ ವ್ಯಕ್ತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ. ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

2 Comments
  1. tlover tonet says

    Absolutely pent subject matter, thanks for information. “You can do very little with faith, but you can do nothing without it.” by Samuel Butler.

  2. tlover tonet says

    I have not checked in here for some time since I thought it was getting boring, but the last few posts are good quality so I guess I will add you back to my daily bloglist. You deserve it my friend 🙂

Leave A Reply

Your email address will not be published.