ಬಿ.ಸಿ.ರೋಡ್ ಯುವಕನಿಗೆ ಚೂರಿ ಇರಿತ : ಎಸ್.ಡಿ.ಪಿ.ಐ ಮುಖಂಡ ಶಾಹುಲ್ ಹಮೀದ್, ಪುತ್ರ ಇಮ್ರಾನ್ ಸಹಿತ ಮೂವರನ್ನು ಬಂಧಿಸಿದ ಪೊಲೀಸರು

ಬಂಟ್ವಾಳದ ಬಿ.ಸಿ.ರೋಡ್‌ನ ಅಜ್ಜಿಬೆಟ್ಟುನಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿ ಮೂರು ಜನ ಆರೋಪಿಗಳನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಿ.ಸಿ.ರೋಡ್ ಸಮೀಪದ ಪರ್ಲಿಯಾ ನಿವಾಸಿಗಳಾದ ಎಸ್.ಡಿ.ಪಿ.ಮುಖಂಡ ಎಸ್. ಎಚ್.ಶಾಹುಲ್ ಹಮೀದ್ ಹಾಗೂ ಆತನ ಪುತ್ರ ಇಮ್ರಾನ್ ಮತ್ತು ಸ್ನೇಹಿತ ಸಫ್ವಾನ್ ಎಂಬವರು ಬಂಧಿತ ಆರೋಪಿಗಳು.

ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಸಪಲ್ಯ ಎಂಬವರಿಗೆ ಎ.4ರ ರಾತ್ರಿ ಬಿ.ಸಿ.ರೋಡ್ ಬಳಿಯ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದರು.

ಚೂರಿ ಇರಿತ ಪ್ರಕರಣದ ತನಿಖೆಗೆ ಪೊಲೀಸರು ಮೂರು ತಂಡಗಳನ್ನು ರಚಿಸಿ ತನಿಖೆ ನಡೆಸಿದ್ದರು.

ತನಿಖೆಯ ವೇಳೆ ಹಾದಿ ತಪ್ಪಿಸುವ ಸಲುವಾಗಿ ಸಾಮಾಜಿಕ ಜಾಲತಾಣದಲ್ಲಿ ಮನೋಜ್ ಅವರ ತೇಜೋವದೆ ಮಾಡಿ ಇಲ್ಲಸಲ್ಲದ ಆರೋಪ ಮಾಡಿ ಆತನೇ ಅಣ್ಣನ ಕೈವಾಡವಿದೆ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದರು.

ಆದರೆ ತನಿಖೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ ನೇತೃತ್ವದ ತಂಡ ಯಶಸ್ವಿಯಾಗಿದೆ.

ಖಚಿತ ಮಾಹಿತಿ ಮೇರೆಗೆ ಆರೋಪಿ ಇಮ್ರಾನ್ ಎಂಬವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತನ ತಂದೆ ಶಾಹುಲ್ ಹಮೀದ್ ಮತ್ತು ಸಫ್ವಾನ್ ಬಗ್ಗೆ ಮಾಹಿತಿ ತಿಳಿದು ಬಂದಿದೆ.

Leave A Reply

Your email address will not be published.