ಚಾಮರಾಜನಗರದ ಆಕ್ಸಿಜನ್ ದುರಂತ | 24 ಜನ ಮಾರಣಹೋಮಕ್ಕೆ ಕಾರಣವಾದ ಕೊಲೆಗಡುಕ ರಾಜ್ಯ ಸರ್ಕಾರ

ಚಾಮರಾಜ ನಗರದಲ್ಲಿ ದೇಶದ ಬಹು ದೊಡ್ಡ ಅನಿಲ ದುರಂತ ನಡೆದು ಹೋಗಿದೆ. ಸರ್ಕಾರದ ಮತ್ತು ಅಧಿಕಾರಿಗಳ ನಿರ್ಲಕ್ಷಕ್ಕೆ ಕಳೆದ 24 ಗಂಟೆಗಳಲ್ಲಿ 24 ಕೊರೋನಾ ಸೋಂಕಿತ ರೋಗಿಗಳು ಆಕ್ಸಿಜನ್ ಕೊರತೆ ಮತ್ತು ಇತರ ಸಮಸ್ಯೆಗಳಿಂದ ಮೃತಪಟ್ಟಿರುವ ಘಟನೆ ಜಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಕಳೆದ ರಾತ್ರಿ 16 ಮಂದಿ ರೋಗಿಗಳು ಮೃತಪಟ್ಟಿದ್ದರೆ, ನಸುಕಿನ ಜಾವ 4ಕ್ಕೂ ಹೆಚ್ಚು ಕೋವಿಡ್ ರೋಗಿಗಳು ಆಕ್ಸಿಜನ್ ಇಲ್ಲದೆ ನರಳಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬರುವ ಹೊತ್ತಿಗೆ ರೋಗಿಗಳ ಪ್ರಾಣಪಕ್ಷಿ ಹಾರಿಹೋಗಿತ್ತು. ತಮ್ಮವರನ್ನು ಕಳೆದುಕೊಂಡ ಮನೆಯವರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ದುರ್ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರನ್ನು ಆಸ್ಪತ್ರೆಗೆ ತೆರಳಿ ಪರಿಸ್ಥಿತಿ ಅವಲೋಕಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ದುರ್ಘಟನೆ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಸಚಿವ ಸಂಪುಟ ಸಹೋದ್ಯೋಗಿಗಳ ತುರ್ತು ಸಭೆ ಕರೆದಿದ್ದಾರೆ.
ಮೈಸೂರಿನಿಂದ ನಮಗೆ ಸೂಕ್ತ ಸಮಯಕ್ಕೆ ಆಕ್ಸಿಜನ್ ಪೂರೈಕೆಯಾಗಲಿಲ್ಲ. ಇದರಿಂದ ರೋಗಿಗಳು ಮೃತಪಟ್ಟಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಎಂ ಆರ್ ರವಿ ತಿಳಿಸಿದ್ದಾರೆ.

ಇದೀಗ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೊಗಿ ಕಳಸದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆಕ್ಸಿಜನ್ ದುರಂತ ಪ್ರಕರಣದ‌ ಸಮಗ್ರ ತನಿಖೆಯನ್ನು ನಡೆಸಿ, 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶಿಸಲಾಗಿದೆ.

ಆಕ್ಸಿಜನ್ ಸಿಲಿಂಡರ್ ಗಳು ಮೈಸೂರಿನಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಆದರೆ ಮೈಸೂರಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಆಕ್ಸಿಜನ್ ಸಿಲಿಂಡರ್ ಗಳನ್ನು ಸಪ್ಲೈ ಮಾಡದಂತೆ ತಡೆ ಹಿಡಿದಿದ್ದಾರೆ ಎನ್ನಲಾಗಿದೆ. ಇದೇ ಈ ಆಕ್ಸಿಜನ್ ದುರಂತಕ್ಕೆ ಕಾರಣ ಎನ್ನಲಾಗಿದೆ.

ಮಾಮೂಲಿ ಸರ್ಕಾರಿ ನೌಕರ ಸಣ್ಣಪುಟ್ಟ ತಪ್ಪು ಮಾಡಿದರೆ ಸಸ್ಪೆಂಡ್ ಮಾಡುವ ಸರಕಾರ ಈಗ ಸಿಲಿಂಡರ್ ತಲುಪಿಸದಂತೆ ತಡೆದ ರೋಹಿಣಿ ಸಿಂಧೂರಿ ಮತ್ತು ಬೇಜವಾಬ್ದಾರಿಯಿಂದ ವರ್ತಿಸಿದ
ಚಾಮರಾಜನಗರದ ಡಿಸಿ ರವಿ ಅವರನ್ನು ಸಸ್ಪೆಂಡ್ ಮಾಡುವ ತಾಕತ್ತು ಇದೆಯಾ ಈ ಸರ್ಕಾರಕ್ಕೆ ಇದೆಯಾ ?

ಬೆಂಗಳೂರು ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಸರ್ಕಾರ ಸೋಂಕಿತ ಪ್ರಾಣವನ್ನು ಕಿತ್ತು ತಿಂದಿದೆ. ಈಗ ಸತ್ತವರ ಕುಟುಂಬಸ್ಥರ ಶಾಪ ಕರ್ನಾಟಕದ ಬಿಜೆಪಿ ಸರ್ಕಾರಕ್ಕೆ ತಟ್ಟದೇ ಹೋಗುವುದಿಲ್ಲ. ಪ್ರತಿಸಲವೂ ಕೊರೋ ನಾ ವಿಷಯದಲ್ಲಿ ಎಡವುತ್ತಿರುವ ಎಡಬಿಡಂಗಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕಾಗಿದೆ. ದುರಂತ ಎಂದರೆ ಕಾಂಗ್ರೆಸ್ಸಾಗಲಿ ಮತ್ತೊಂದು ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಆಗಲೀ ಈ ಸನ್ನಿವೇಶದಲ್ಲಿ ಸರಕಾರವನ್ನು ನಿಯಂತ್ರಿಸುವ, ಕಟ್ಟಿಹಾಕುವ, ಅಲುಗಿಸಿ ಪ್ರಶ್ನಿಸುವಲ್ಲಿ ವಿಫಲವಾಗಿದೆ.

Leave A Reply

Your email address will not be published.