ಧರ್ಮಸ್ಥಳ ಗ್ರಾಮದ ಬೊಳಿಯಾರು ಪ್ರದೇಶವನ್ನು ಕಂಟೈನ್ಮೆಂಟ್ ಎಂದು ಘೋಷಣೆ ! ಒಳ ಹೊರ ಹೋಗುವ ರಸ್ತೆಗಳು ಬಂದ್
ಧರ್ಮಸ್ಥಳ ತಾಲೂಕು ಆಡಳಿತದ ಸೂಚನೆಯಂತೆ ಧರ್ಮಸ್ಥಳ ಗ್ರಾಮದ ಬೊಳಿಯಾರು ಪ್ರದೇಶವನ್ನು ಕಂಟೈನ್ಮೆಂಟ್ ಎಂದು ಘೋಷಿಸಲಾಗಿದೆ.
ಕಂಟೈನ್ಮೆಂಟ್ ಪ್ರದೇಶವೆಂದು ಘೋಷಣೆಯಾದ ಕಾರಣ
ಬೊಳಿಯಾರು ಪ್ರದೇಶದವರು ಯಾರೂ ಹೊರಗೆ ಹೋಗುವಂತಿಲ್ಲ. ಈಗ ಈ ಪ್ರದೇಶಕ್ಕೆ ಪ್ರವೇಶ ನಿಷೇಧಿಸಲಾಗಿದ್ದು ಈ ಪ್ರದೇಶಕ್ಕೆ ಹೋಗುವ ರಸ್ತೆಯನ್ನು ಬಂದ್ ಮಾಡಲಾಗಿದೆ.
ಅಲ್ಲಿ ಒಟ್ಟು 16 ಮನೆಗಳಿದ್ದು ಅವುಗಳಲ್ಲಿ 14 ಮನೆಗಳಲ್ಲಿ ಒಟ್ಟು 34 ಜನ ಪಾಸಿಟಿವ್ ಪ್ರಕರಣ ಪತ್ತೆಯಾದ ಕಾರಣ ಮುಂಜಾಗ್ರತೆಯಾಗಿ ಬೋಳಿಯಾರು ಪ್ರದೇಶವನ್ನು ಕಂಟೋನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ.
ದಿನದ ಅಗತ್ಯ ವಸ್ತುಗಳಿಗೆ ಗ್ರಾಮಪಂಚಾಯತಿನಿಂದ ಕ್ರಮವಹಿಸಲಾಗುವುದು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಹರ್ಷಿತ್ ಜೈನ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – ಸಿಬ್ಬಂದಿಗಳು, ಕಂದಾಯ ಇಲಾಖೆ ಸಿಬ್ಬಂದಿಗಳು ,ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.
ಈ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿಯಿಂದ ಹಾಗೂ ಪೊಲೀಸ್ ಇಲಾಖೆಯಿಂದ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.