ವೆನ್ಲಾಕ್ ಆಸ್ಪತ್ರೆಯ 2ನೇ ಮಹಡಿಯಿಂದ ಜಿಗಿದ ಕೋವಿಡ್ ಸೋಂಕಿತ

ಮಂಗಳೂರು: ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯ 2ನೇ ಮಹಡಿಯಿಂದ ಕೊರೊನಾ ಸೋಂಕಿತನೋರ್ವ ಹಾರಿದ ಘಟನೆ ಇಂದು ನಡೆದಿದ್ದು, ಆತ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ.

ಮಂಗಳೂರಿನ ಕಲ್ಲಮುಂಡ್ಕೂರಿನ ಬನಂಗಡಿ ನಿವಾಸಿ ಹರೀಶ್(30) 2ನೇ ಮಹಡಿಯಿಂದ ಹಾರಿದಾತ. ಹರೀಶ್‌ಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಆದರೆ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ‌ ಇವರು ಇಂದು ಕೋವಿಡ್ ಆಸ್ಪತ್ರೆಯ 2ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಪರಿಣಾಮ ತಲೆಗೆ ಹಾಗೂ ದೈಹಿಕವಾಗಿ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ

Leave A Reply

Your email address will not be published.