ಬಿಬಿಎಂಪಿ ಯಲ್ಲಿ ನಡೆದಿದೆ ಸಾಮೂಹಿಕ ನರಹತ್ಯೆ | ಅಪರಾಧಿಗಳಿಗೆ ಗಲ್ಲು ಒಂದೇ ಪರಿಹಾರ !!!
ಕೊರೋನಾದಂತಹ ತುರ್ತು ಆರೋಗ್ಯ ಪರಿಸ್ಥಿತಿಯ ನಡುವೆ ಆಸ್ಪತ್ರೆಯವರು ಜನರ ಜೀವದ ಜತೆಗೆ ಆಟವಾಡುತ್ತಿರುವ, ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡುತ್ತಿದ್ದ ಮಾಫಿಯಾವನ್ನು ಸಂಸದ ತೇಜಸ್ವಿ ಸೂರ್ಯ ಬಹಿರಂಗಪಡಿಸಿದ್ದಾರೆ.
ಅಕ್ರಮವಾಗಿ ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ.
ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಮೃತಪಟ್ಟವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡುತ್ತಿರುವ ಮಾಫಿಯಾವನ್ನು ತೇಜಸ್ವಿ ಸೂರ್ಯ ಸಾಕ್ಷ್ಯ ಸಮೇತವಾಗಿ ಬಹಿರಂಗಗೊಳಿಸಿದ್ದಾರೆ.
“ಕೆಲವು ಬಿಬಿಎಂಪಿ ಅಧಿಕಾರಿಗಳು ಈ ಮಾಫಿಯದಲ್ಲಿ ಶಾಮೀಲಾಗಿದ್ದಾರೆ.
“ಕೋವಿಡ್-19 ವಾರ್ ರೂಮ್ ಗೆ ಹೋಗಿ ಸಮಸ್ಯೆಗಳಿದ್ದರೆ ಬಗೆಹರಿಸಲು ಸಹಕರಿಸಲು ಯತ್ನಿಸಿದರೂ ಜನಪ್ರತಿನಿಧಿಗಳಿಗೆ ವಾರ್ ರೂಮ್ ಗಳಿಗೆ ಹೋಗಲು ಬಿಡುತ್ತಿರಲಿಲ್ಲ” ಶಾಸಕ ಸತೀಶ್ ರೆಡ್ಡಿ ಅವರು ಜನರನ್ನು ಕರೆದೊಯ್ದು ಪ್ರತಿಭಟನೆ ನಡೆಸಿದರೂ ಸಹ ವಾರ್ ರೂಮ್ ಒಳಗೆ ಹೋಗಿ ತಪಾಸಣೆ ನಡೆಸುವುದಕ್ಕೆ ಬಿಡದಂತಹ ವಾತಾವರಣ ಇದೆ” ಎಂದು ತೇಜಸ್ವಿ ಸೂರ್ಯ ಗಂಭೀರ ಆರೋಪಿಸಿದ್ದಾರೆ.
” ಇದೊಂದು ಕೇವಲ ಭ್ರಷ್ಟಾಚಾರವಲ್ಲ, ಕೊಲೆ. ಬೆಡ್ ಸಿಗದೇ ಸಾವನ್ನಪ್ಪಿದವರ ಕುಟುಂಬ ಸದಸ್ಯರಲ್ಲಿ ಕ್ಷಮೆ ಕೇಳುತ್ತೇನೆ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೂ ಈ ವಿಷಯವನ್ನು ಬಿಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.
ಸರಿಯಾದ ಸಮಯಕ್ಕೆ ಬೆಡ್ ಸಿಗದೇ ಅದೆಷ್ಟು ಜನ ಸಾವನ್ನಪ್ಪಿದ್ದಾರೆಯೋ ದೇವರಿಗೆ ಗೊತ್ತು. ಇದು ಸಿಬಿಐ ತನಿಖೆಗೆ ಮಾತ್ರ ಅರ್ಹವಾದ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ನರಹತ್ಯೆಯ ಪ್ರಕರಣ.