ಮೇ.12ರವರೆಗೆ ಲಾಕ್ ಡೌನ್ ವಿಸ್ತರಣೆ | ಬಳಿಕ ಮುಂದಿನ ತೀರ್ಮಾನ -ಬಿಎಸ್ವೈ
ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸದ್ಯ ಮೇ 12ರ ವರೆಗೆ ಸೆಮಿ ಲಾಕ್ಡೌನ್ ಇರಲಿದ್ದು,ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ರಾಜ್ಯದಲ್ಲಿ ಸಚಿವರಿಗೆ ವಿವಿಧ ಜವಾಬ್ದಾರಿ ಹಂಚಲಾಗಿದ್ದು,
ಮೆಡಿಕಲ್ ಆಕ್ಸಿಜನ್ ವ್ಯವಸ್ಥೆಯ ಹೊಣೆ ಸಚಿವ ಜಗದೀಶ್ ಶೆಟ್ಟರ್ ಅವರಿಗೆ, ರೆಮ್ಡಿಸಿವಿವರ್ ಪೂರೈಕೆ ನಿರ್ವಹಣೆ ಜವಾಬ್ದಾರಿ ಉಪ ಮುಖ್ಯಮಂತ್ರಿ ಡಾ ಸಿ.ಎನ್. ಆಶ್ವತ್ಥನಾರಾಯಣ ಅವರಿಗೆ, ಆಸ್ಪತ್ರೆಗಳಲ್ಲಿನ ಬೆಡ್ ಗಳ ಹೊಣೆಗಾರಿಕೆಯನ್ನು ಸಚಿವ ಆರ್. ಅಶೋಕ್ ಅವರಿಗೆ ವಹಿಸಕೊಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.