ಇಂದಿನಿಂದ 2 ದಿನ ದಕ್ಷಿಣ ಕನ್ನಡ ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆಯ ನಿರೀಕ್ಷೆ

ಕರಾವಳಿ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಮತ್ತು ಬಹುತೇಕ ಜಿಲ್ಲೆಗಳಲ್ಲಿ ಮೇ 5 ರಿಂದ ಮೇ 7 ರವರೆಗೆ ಗುಡುಗುಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ ದಕ್ಷಿಣಕನ್ನಡ ಮತ್ತಿತರ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗವೂ ಕೂಡಾ ಅಧಿಕವಾಗಿರಲಿದೆ. ಅದು ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ ದಕ್ಷಿಣ ಕನ್ನಡ, ಸೇರಿದಂತೆ ಚಿಕ್ಕಮಗಳೂರು, ಉತ್ತರಕನ್ನಡ, ಕೊಡಗು, ಹಾಸನ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದೆ.

Leave A Reply

Your email address will not be published.