Ad Widget

ಬೆಡ್ ಬ್ಲಾಕಿಂಗ್ ದಂಧೆಯ ಪ್ರಮುಖ ಆರೋಪಿ ಕಾಂಗ್ರೆಸ್ ನಾಯಕರೊಂದಿಗೆ ಇರುವ ಫೋಟೋಸ್ ವೈರಲ್

ಬೆಡ್ ಬ್ಲಾಕಿಂಗ್ ದಂಧೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಈ ಪೈಕಿ ಪ್ರಮುಖ ಆರೋಪಿ ಒಬ್ಬಳು ಕಾಂಗ್ರೆಸ್ ನಾಯಕರ ಜೊತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Ad Widget Ad Widget

ಬೆಂಗಳೂರು ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೇತ್ರಾವತಿ (42) ಮತ್ತು ರೋಹಿತ್ (32) ಅವರನ್ನು ಬಂಧಿಸಿದ್ದಾರೆ. ಈ ಪೈಕಿ ನೇತ್ರಾವತಿ ಹಲವು ಕಾಂಗ್ರೆಸ್ ನಾಯಕರ ಜೊತೆ ಇರುವ ಫೋಟೋಗಳು ಈಗ ಹರಿದಾಡುತ್ತಿದೆ.

Ad Widget Ad Widget

ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಜತೆ ಇರುವ ಫೋಟೋಗಳು ಹರಿದಾಡುತ್ತಿದೆ.

ಬಂಧಿತ ನೇತ್ರಾವತಿ ಮತ್ತು ರೋಹಿತ್ ಇವರಿಬ್ಬರೂ ನೆರೆಮನೆ ನಿವಾಸಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ನಾನು ಸಾಮಾಜಿಕ ಕಾರ್ಯಕರ್ತೆ ಎಂದು ಆಕೆ ಪೊಲೀಸರ ಬಳಿ ನೇತ್ರಾವತಿ ಹೇಳಿದ್ದಾಳೆ.
ಬಿಬಿಎಂಪಿ ವಾರ್ ರೂಮಿನಲ್ಲಿ ಈಕೆ ಹಲವರ ಜೊತೆ ಸಂಪರ್ಕದಲ್ಲಿರುವುದು ಖಚಿತವಾಗಿದೆ. ಈ ದಂಧೆಯ ಹಿಂದೆ ದೊಡ್ಡ ಜಾಲವೇ ಇರುವುದು ಸಿಸಿಬಿ ಗಮನಕ್ಕೆ ಬಂದಿದೆ.
ಬೆಡ್ ಬ್ಲಾಕಿಂಗ್ ಬ್ಲ್ಯಾಕ್ ದಂಧೆಯಲ್ಲಿ ಇಬ್ಬರು ಮಾತ್ರ ಅಲ್ಲ, ಒಟ್ಟಿ 17 ಜನ ನೇರವಾಗಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಭಾಗಿಯಾಗಿರುವ ವಿಚಾರ ಸಿಸಿಬಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳಾದ ನೇತ್ರಾವತಿ ಮತ್ತು ರೋಹಿತ್ ಅವರ ಕರೆ ಡಿಟೇಲ್ ಪರಿಶೀಲಿಸಿದಾಗ ಸ್ಫೋಟಕ ವಿಚಾರಗಳು ಸಿಸಿಬಿ ತಂಡಕ್ಕೆ ಲಭ್ಯವಾಗಿದೆ.
ಈಗ ಪೊಲೀಸರು ಇವರ ಜೊತೆ ಸಂಪರ್ಕದಲ್ಲಿದ್ದವರ ಪತ್ತೆಗೆ ಮುಂದಾಗುತ್ತಿದ್ದಂತೆ ಹಲವರು ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿದ್ದಾರೆ.

ಕೆಲವು ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಯ ಮ್ಯಾನೇಜ್ ಮೆಂಟ, ಸಣ್ಣ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರು ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ವಾರ್ ರೂಂನ ಜೊತೆಯಲ್ಲಿ ನೇರವಾಗಿ ಸಂಪರ್ಕ ಹೊಂದಿದ್ದ ಇವರು ಆರೋಪಿಗಳಿಗೆ ನೇರವಾಗಿ ಕರೆ ಮಾಡಿದರ ಬಗ್ಗೆಯೂ ಮಾಹಿತಿಗಳು ಲಭ್ಯವಾಗಿದೆ.

ಕಳೆದ ರಾತ್ರಿ ಜಯನಗರ ಪೊಲೀಸ್ ಠಾಣೆಗೆ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿ ಬೆಡ್ ಬ್ಲಾಕಿಂಗ್ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸಂಜೆಯ ವೇಳೆಗೆ ಮತ್ತಷ್ಟು ಆರೋಪಿಗಳು ಬಂಧನವಾಗುವ ಸಾಧ್ಯತೆಯಿದೆ.

Ad Widget Ad Widget

Leave a Reply

error: Content is protected !!
Scroll to Top
%d bloggers like this: