ಕೋವಿಡ್ 19 ನಿಯಮ ಉಲ್ಲಂಘನೆ ಆರೋಪ |ಬೀಚ್‌ನಲ್ಲಿ ಮದುವೆ ಪಾರ್ಟಿಗೆ ಅಧಿಕಾರಿಗಳ ದಾಳಿ

ಮಂಗಳೂರಿನ ಕುಳಾಯಿ ಶೋರ್ ಬೀಚ್ ರೆಸಾರ್ಟ್‌ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎನ್ನಲಾದ ಆರೋಪದಲ್ಲಿ ಮದುವೆ ಪಾರ್ಟಿಗೆ ಮಂಗಳವಾರ ಅಧಿಕಾರಿಗಳು ದಾಳಿ ನಡೆಸಿ ಕೇಸು ದಾಖಲಿಸಿದ್ದಾರೆ.

ಶೋರ್ ರೆಸಾರ್ಟ್‌ನಲ್ಲಿ ಮಂಗಳವಾರ ಸಂಜೆ ಮದುವೆ ಪಾರ್ಟಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗಿತ್ತು. ಅಲ್ಲದೆ ಡಿಜೆ, ಮದ್ಯಪಾನದ ವ್ಯವಸ್ಥೆ ಮಾಡಲಾಗಿತ್ತು‌ ಎನ್ನಲಾಗಿದೆ.

ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಮಾರ್ಗಸೂಚಿ ಉಲ್ಲಂಘಿಸಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿಸಲಾಗಿತ್ತು. ಇದು ಮಾತ್ರವಲ್ಲದೆ ಡಿಜೆ, ಮದ್ಯಪಾನ ವ್ಯವಸ್ಥೆ ಮಾಡಲಾಗಿತ್ತು‌. ಈ ಬಗ್ಗೆ ಮಾಹಿತಿ ಪಡೆದ ಎಸಿ ಮದನ್ ಮೋಹನ್ ನೇತೃತ್ವದ ಅಧಿಕಾರಿಗಳ ತಂಡ ಧಾಳಿ ನಡೆಸಿ, ಕಾರ್ಯಕ್ರಮ ಆಯೋಜಕರ ವಿರುದ್ಧ ಹಾಗೂ ರೆಸಾರ್ಟ್ ಮಾಲೀಕರ ವಿರುದ್ಧ ಕೇಸು ದಾಖಲಿಸಲು ಸುರತ್ಕಲ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Leave A Reply

Your email address will not be published.