ಕೊರೊನಾ ನಿಯಂತ್ರಣಕ್ಕೆ ಸಂಪೂರ್ಣ ಲಾಕ್ ಡೌನ್ ಅನಿವಾರ್ಯ – ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,ಜಿಲ್ಲೆಯಲ್ಲೂ ಕೂಡ ಪ್ರಕರಣಗಳ ಸಂಖ್ಯೆ ಏರುತ್ತಿದೆ. ಆದ್ದರಿಂದ
ಜನತಾ ಕರ್ಫ್ಯೂ ನಿಂದ ನಿಯಂತ್ರಣ ಕಷ್ಟ ಅನಿಸುತ್ತೆ. ಅವಶ್ಯಕ ವಸ್ತುಗಳಿಗೆ ಮಾತ್ರ ಅವಕಾಶ ನೀಡಿ, ಉಳಿದಂತೆ ಪೂರ್ಣ ಲಾಕ್ ಡೌನ್ ಮಾಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಸಂಸದೆ, ಜನರು ಈಗಿನಂತೆ ಓಡಾಡಿದರೆ ಕೋವಿಡ್ ನಿಯಂತ್ರಣ ಸಾಧ್ಯವಿಲ್ಲ. ಮದುವೆ, ದೇವಸ್ಥಾನ ಕಾರ್ಯಕ್ರಮ, ಭೂತಾರಾಧನೆ ಎಲ್ಲವೂ ನಡೆಯುತ್ತಿದೆ. ಜನ ಹೆಚ್ಚು ಬೆರೆಯುವುದರಿಂದ ರೋಗ ಹರಡುತ್ತದೆ. ಮುಂಬೈ, ಬೆಂಗಳೂರಿನಿಂದಲೂ ಜನರು ಜಿಲ್ಲೆಗೆ ಬರುತ್ತಿದ್ದಾರೆ. ಹೊರ ಜಿಲ್ಲೆಗಳಿಂದ ಬಂದವರಿಗೆ ಆದ್ಯತೆ ಮೇರೆಗೆ ಟೆಸ್ಟ್ ಮಾಡಿಸಬೇಕು ಎಂದರು.

ಕ್ಷಿಪ್ರ ಟೆಸ್ಟ್ ಆರಂಭಿಸಲು ಸೂಚನೆ ನೀಡಿದ್ದೇನೆ.ಹೋಂ ಕ್ವಾರಂಟೈನ್ ಕಡ್ಡಾಯ ಮಾಡಬೇಕು.15 ದಿನಗಳ ಕಟ್ಟುನಿಟ್ಟಿನ ಕ್ರಮ ಅನಿವಾರ್ಯ.ಜನರು ಮನೆಯಿಂದ ಹೊರಬಂದರೆ ಚೈನ್ ಲಿಂಕ್ ಕಟ್ ಮಾಡಲು ಅಸಾಧ್ಯ ಎಂದು ಹೇಳಿದ್ದಾರೆ.

Leave A Reply

Your email address will not be published.