ಭೂಗತ ಪಾತಕಿ ಛೋಟಾ ರಾಜನ್ ಕೊರೋನಾಗೆ ಬಲಿ
ಮುಂಬೈ: ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ ಕೊರೋನಾ ದಿಂದ ದೆಹಲಿಯ ಅಖಿಲ ಭಾರತ ವೈದ್ಯಕೀಯ ಸಂಸ್ಥೆ(ಏಮ್ಸ್)ಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಕೊರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಈತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
61 ವರ್ಷದ ಛೋಟಾ ರಾಜನ್ ನನ್ನು 2015 ರಲ್ಲಿ ಇಂಡೋನೇಷ್ಯಾದ ಬಾಲಿಯಿಂದ ಗಡೀಪಾರು ಮಾಡಿದ ನಂತರ ಬಂಧನಕ್ಕೊಳಪಡಿಸಿ ದೆಹಲಿಯ ಹೈ ಸೆಕ್ಯುರಿಟಿ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು.
ಪ್ರಕರಣದ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜನ್ ಅವರನ್ನು ಹಾಜರುಪಡಿಸಲು ಸಾಧ್ಯವಿಲ್ಲ. ಆರೋಪಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಏಮ್ಸ್ ಗೆ ದಾಖಲಿಸಲಾಗಿತ್ತು.
ಛೋಟಾ ರಾಜನ್ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಮುಂಬೈನಲ್ಲಿ ಆತನ ವಿರುದ್ಧ ಬಾಕಿ ಇರುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಮತ್ತು ಅವುಗಳ ವಿಚಾರಣೆಗಾಗಿ ವಿಶೇಷ ಕೋರ್ಟ್ ಸ್ಥಾಪಿಸಲಾಗಿತ್ತು.