ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪಾಕಿಸ್ತಾನದ ಪ್ರತಿಷ್ಠಿತ ಕೇಂದ್ರಿಯ ಸುಪೀರಿಯರ್ ಸರ್ವೀಸಸ್ (ಸಿಎಸ್ಎಸ್) ಗೆ ಆಯ್ಕೆ

ಪಾಕಿಸ್ತಾನದಲ್ಲಿ ಇದೇ ಮೊದಲ ಬಾರಿಗೆ ಹಿಂದೂ ಮಹಿಳೆಯೊಬ್ಬರು ಪಾಕಿನ ಪ್ರತಿಷ್ಠಿತ ಕೇಂದ್ರಿಯ ಸುಪೀರಿಯರ್ ಸರ್ವೀಸಸ್ (ಸಿಎಸ್ಎಸ್) ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಆ ಮೂಲಕ ಪಾಕಿಸ್ತಾನ ಆಡಳಿತ ಸೇವೆಗೆ ಅವರು ಆಯ್ಕೆಯಾಗಿದ್ದಾರೆ.

 

ಎಂಬಿಬಿಎಸ್ ಓದಿ ಡಾಕ್ಟರ್ ಆಗಿರುವ ಸನಾ ರಾಮಚಂದ್ ನೇ ಈಗ ಪಾಕಿಸ್ತಾನದ ಸಿವಿಲ್ ಸರ್ವೀಸಸ್ ಪರೀಕ್ಷೆ ಪಾಸ್ ಮಾಡಿದ ಹಿಂದೂ ಮಹಿಳೆ. ಈಕೆ ಪಾಕಿಸ್ತಾನದಲ್ಲಿ ಅತಿ ಹೆಚ್ಚು ಹಿಂದೂ ಜನಸಂಖ್ಯೆಯನ್ನು ಹೊಂದಿರುವ ಸಿಂಧ್ ಪ್ರಾಂತ್ಯದ ಶಿಖರ್ ಪುರ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಮೇಲೆ ಬಂದವರಾಗಿದ್ದಾರೆ. ಅಲ್ಲಿ ಲಿಖಿತ ಪರೀಕ್ಷೆಗೆ ಹಾಜರಾಗಿದ್ದ 18,553 ಅಭ್ಯರ್ಥಿಗಳ ಪೈಕಿ 221 ಮಂದಿ ಅಭ್ಯರ್ಥಿಗಳು ಸಿಎಸ್ಎಸ್ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ಅವರಲ್ಲಿ ಸನಾ ರಾಮಚಂದ್ ಕೂಡಾ ಒಬ್ಬರಾಗಿದ್ದಾರೆ. ವಿಸ್ತಾರವಾದ ವೈದ್ಯಕೀಯ, ಮಾನಸಿಕ ಮತ್ತು ಮೌಖಿಕ ಪರೀಕ್ಷೆ ನಂತರ ಅಂತಿಮ ಆಯ್ಕೆ ಮಾಡಲಾಗುತ್ತದೆ. 

ಫಲಿತಾಂಶದ ನಂತರ ಟ್ವೀಟ್ ಮಾಡಿರುವ ಸನಾ ರಾಮಚಂದ್, ವಹೇಗುರು ಜಿ ಕಾ ಖಲ್ಸಾ ವಹೇ ಗುರು ಜಿಕಿ ಫತೇಹ್, ಸರ್ವಶಕ್ತನಾದ ದೇವರ ಕೃಪೆಯಿಂದ ನಾನು ಸಿಎಸ್ ಎಸ್ 2020ನ್ನು ಪೂರ್ಣಗೊಳಿಸಿದ್ದೇನೆ. ಪಿಎಸ್ ಎಸ್ ಹುದ್ದೆಗೆ ನೇಮಕವಾಗಿದ್ದೇನೆ ಎಂದು ಹೇಳಿಕೊಳ್ಳಲು ನನಗೆ ಸಂತೋಷವಾಗಿದೆ. ಇದರ ಎಲ್ಲಾ ಕ್ರೆಡಿಟ್ ನನ್ನ ಪೋಷಕರಿಗೆ ಹೋಗುತ್ತದೆ ಎಂದಾಕೆ ಹೇಳಿದ್ದಾರೆ.

ಪಿಎಎಸ್ ಉನ್ನತ ಶ್ರೇಣಿಯಾಗಿದ್ದು, ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಸಹಾಯಕ ಆಯುಕ್ತರನ್ನಾಗಿ ನಿಯೋಜಿಸಲಾಗುತ್ತದೆ ನಂತರ ಜಿಲ್ಲಾಧಿಕಾರಿಯಾಗಿ ಬಡ್ತಿ ನೀಡಲಾಗುತ್ತದೆ. ಸನಾ ರಾಮಚಂದ್ ಪಿಎಎಸ್ ಹುದ್ದೆಗೇರಿದ ಪ್ರಥಮ ಹಿಂದೂ ಮಹಿಳೆಯಾಗಿದ್ದಾರೆ ಎಂದು ಬಿಬಿಸಿ ಉರ್ದು ವರದಿ ಮಾಡಿದೆ. ಪಾಕಿಸ್ತಾನದಲ್ಲಿ ಹಿಂದೂ ಸಮುದಾಯಕ್ಕೆ ಸನಾ ರಾಮಚಂದ್ ಹೆಮ್ಮೆಯನ್ನುಂಟು ಮಾಡಿದ್ದಾರೆ ಎಂದು ಅಲ್ಲಿನ ಹಿರಿಯ ರಾಜಕೀಯ ಮುಖಂಡ 
ಫರ್ಹತುಲ್ಲಾ ಬಾಬರ್ ಟ್ವೀಟ್ ಮಾಡಿದ್ದಾರೆ. 

Leave A Reply

Your email address will not be published.