ಬೆಳ್ತಂಗಡಿ ತಾಲೂಕಿನಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿತರ ಸಂಖ್ಯೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆ ಪ್ರದೇಶ ಸೀಲ್ ಡೌನ್
ಬೆಳ್ತಂಗಡಿ ತಾಲೂಕಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಾಗು ತ್ತಿದ್ದು, ತಾಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನಕಟ್ಟೆ ಪ್ರದೇಶದಲ್ಲಿ ಸುಮಾರು 25 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.
ಮಾವಿನಕಟ್ಟೆ ಪ್ರದೇಶದಲ್ಲಿ ಹತ್ತಕ್ಕೂ ಹೆಚ್ಚು ಮನೆಗಳಿವೆ. ಸ್ಥಳಕ್ಕೆ ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಭಾಷಿಣಿ ಗೌಡ, ಉಪಾಧ್ಯಕ್ಷೆ ಕುಸುಮ, ಸದಸ್ಯರಾದ ಸುಧಾಕರ ಮಜಲು, ಯಶೋಧರ ಶೆಟ್ಟಿ, ಮಾಣಿಕ್ಯ, ಅಬ್ದುಲ್ ಕರೀಂ, ವಿಜಯ್ ಗೌಡ, ಲತೀಫ್, ಪುಷ್ಪ, ಮೋಹಿನಿ, ಇಂದಿರಾ, ಮಾರಿಟ್ ಪಿಂಟೋ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್, ಕಾರ್ಯದರ್ಶಿ ಕುಂಜ್ಞ, ಬಿಟಿ ಪೊಲೀಸ್ ವೆಂಕಪ್ಪ, ಗ್ರಾಮ ಪಂಚಾಯತ್ ಸಿಬ್ಬಂದಿ ರವಿ ಹಾಗೂ ರಾಜೇಶ್ ಪೆರ್ಮುಡ ಮುಂತಾದವರು ಭೇಟಿ ನೀಡಿ ಮಾವಿನಕಟ್ಟೆ ಪ್ರದೇಶವನ್ನು ಸೀಲ್ ಡೌನ್ ಮಾಡಿದರು.