ಮಂಗಳೂರು : ಆಮ್ಲಜನಕ ಪೂರೈಕೆಯ ಘಟಕಗಳಿಗೆ ಉಸ್ತುವಾರಿ ಸಚಿವರು ಭೇಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿ, ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಹಾಗೂ ಡಿಸಿ ಡಾ.ಕೆ.ವಿ ರಾಜೇಂದ್ರ ಅವರು ಆಸ್ಪತ್ರೆಗಳಿಗೆ ಆಮ್ಲಜನಕದ ಪೂರೈಕೆಯನ್ನು ಸುವ್ಯವಸ್ಥಿತಗೊಳಿಸುವ ನಿಟ್ಟಿನಲ್ಲಿ ಭಾನುವಾರ ಮೂರು ಪ್ರಮುಖ ಆಮ್ಲಜನಕ ಘಟಕಗಳಿಗೆ ಭೇಟಿ ನೀಡಿ ಆಮ್ಲಜನಕ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿದರು.


Ad Widget

Ad Widget

Ad Widget

Ad Widget

Ad Widget

Ad Widget

ಆಸ್ಪತ್ರೆಗಳಿಂದ ಆಮ್ಲಜನಕದ ಬೇಡಿಕೆ, ಪೂರೈಕೆ ಒಟ್ಟು ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳಲು ಈಗಾಗಲೇ ಜಿಲ್ಲಾಡಳಿತದಿಂದ ಅಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಣಕ್ಕೆ ತರಲು ಅವಶ್ಯಕವಾಗಿ ಮಾಡಬೇಕಾದ ಕಾರ್ಯಗಳು ಭರದಿಂದ ನಡೆಯುತ್ತಿದ್ದು, ಆಮ್ಲಜನಕ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಪರಿಶೀಲಿಸಲಾಗಿದ್ದು, ಕೊರೊನಾ ರೋಗಿಗಳಿಗೆ ಅವಶ್ಯಕತೆ ಬಿದ್ದಲ್ಲಿ ಆಮ್ಲಜನಕದ ಪೂರೈಕೆಯಲ್ಲಿ ಯಾವುದೇ ತೊಂದರೆ ಇರುವುದಿಲ್ಲ ಎಂದು ಶಾಸಕ ಡಾ.ಭರತ್ ಶೆಟ್ಟಿ ತಿಳಿಸಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!
Scroll to Top
%d bloggers like this: