Ad Widget

ಬಡವರು ಮತ್ತು ಕಾರ್ಮಿಕರಿಗೆ ಗುಡ್ ನ್ಯೂಸ್ | ಲಾಕ್ ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರ

ಬೆಂಗಳೂರು : ರಾಜ್ಯದಲ್ಲಿ ಕರೋನ ಅಟ್ಟಹಾಸ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಮೇ 10ರಿಂದ ಮೇ 24ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಆಹಾರವನ್ನು ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಸರಕಾರವು ಕೊರೋನ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರಿಂದ ಕೂಲಿ ಕಾರ್ಮಿಕರಿಗೆ, ವಲಸಿಗರಿಗೆ ಹಾಗೂ ಇತರೆ ದುರ್ಬರಾಜ್ಯಲ ವರ್ಗದವರಿಗೆ ತೊಂದರೆಯಾಗುತ್ತಿದೆ. ಇವರ ಅನುಕೂಲಕ್ಕಾಗಿ ರಾಜ್ಯ ಸರಕಾರವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇರುವ ಇಂದಿರಾ ಕ್ಯಾಂಟೀನ್ ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟವನ್ನು ಉಚಿತವಾಗಿ ನೀಡುತ್ತಿದೆ.
ಲಾಕ್ ಡೌನ್ ಅವಧಿಯಲ್ಲಿ ಅದೆಷ್ಟೋ ಜನರು ಒಂದೊತ್ತಿ ನ ಊಟ ಕ್ಕೂ ಪರಿತಪಿಸುತ್ತಿದ್ದಾರೆ. ಸರಕಾರದ ಈ ಯೋಜನೆಯಿಂದ ಹಲವಾರು ಜನರಿಗೆ ಉಪಯೋಗವಾಗಲಿದೆ.

Leave a Reply

error: Content is protected !!
Scroll to Top
%d bloggers like this: