ಕೊಡಗು, ಮೈಸೂರು ಗಡಿಭಾಗದ ಚೆಕ್ ಪೋಸ್ಟ್ ಗೆ ಎಸ್ ಪಿ ಭೇಟಿ ಮತ್ತು ಭದ್ರತೆ ಪರಿಶೀಲನೆ

ಮಡಿಕೇರಿ: ರಾಜ್ಯದಲ್ಲಿ 14 ದಿನಗಳ ಕಾಲ ಲಾಕ್‌ಡೌನ್‌ ವಿಧಿಸಿದ್ದು, ಕೊರೋನಾ ಸೋಂಕನ್ನು ನಿಯಂತ್ರಿಸುವ ಸಲುವಾಗಿ ಕೆಲವು ಕಟ್ಟು ನಿಟ್ಟಿನ ಕ್ರಮಗಳನ್ನು ಸರಕಾರ ಜಾರಿಗೆ ತಂದಿದೆ. ಅನಗತ್ಯವಾಗಿ ಸಂಚರಿಸುವ ಎಲ್ಲಾ ವಾಹನಗಳನ್ನು ಮುಟ್ಟುಗೋಲು ಹಾಕುವುದಲ್ಲದೆ, ಪ್ರಕರಣ ದಾಖಲಿಸಲಾಗುತ್ತದೆ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಎಚ್ಚರಿಕೆ ನೀಡಿದ್ದಾರೆ.

ಕೊಡಗು, ಮೈಸೂರು ಗಡಿಭಾಗದ ಕುಶಾಲನಗರದ ಕೊಪ್ಪ ಗಡಿ ಚೆಕ್ ಪೋಸ್ಟ್ ಗೆ ಇಂದು ಭೇಟಿ ನೀಡಿ ಅಲ್ಲಿನ ಕಾನೂನು ಸುವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ ಅವರು ಸ್ಥಳದಲ್ಲಿದ್ದ ಅಧಿಕಾರಿಗಳ ಜೊತೆ ಚರ್ಚಿಸಿದರು. ವಾಹನಗಳ ಸಂಚಾರ, ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಂಖ್ಯೆ, ಹೊರ ಭಾಗದಿಂದ ಬರುತ್ತಿರುವವರ ಮಾಹಿತಿ ಸಂಗ್ರಹ ಮತ್ತಿತ್ತರ ವಿಚಾರಗಳ ಬಗ್ಗೆ ಮಾಹಿತಿ ಪಡೆದರು. ಚೆಕ್ ಪೋಸ್ಟ್ ಗಳಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪೊಲೀಸರು ಕೂಡ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Leave A Reply

Your email address will not be published.