ಕೊರೊನಾಗೆ ಪಬ್ಲಿಕ್ ಟಿವಿ ಕ್ಯಾಮೆರಾಮನ್ ಬಲಿ | 10 ಲಕ್ಷ ಪರಿಹಾರ ಘೋಷಿಸಿದ ಪಬ್ಲಿಕ್ ಟಿವಿ ಆಡಳಿತ ಮಂಡಳಿ

ಕೊರೊನಾಗೆ ಪಬ್ಲಿಕ್ ಟಿವಿ ಕ್ಯಾಮೆರಾಮನ್ ಬಸವರಾಜ ಕೋಟಿ(43) ಬಲಿಯಾಗಿದ್ದಾರೆ.

ಕಳೆದ 5 ವರ್ಷಗಳಿಂದ ಚಿತ್ರದುರ್ಗದಲ್ಲಿ ಪಬ್ಲಿಕ್ ಟಿವಿ ಕ್ಯಾಮಾರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಟಿ, ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ನಿಧನರಾಗಿದ್ದಾರೆ.
ಮೃತ ಬಸವರಾಜ ಕೋಟಿ ಅವರಿಗೆ ಹತ್ತು ವರ್ಷದ ಓರ್ವ ಪುತ್ರ ಮತ್ತು ಪುತ್ರಿ, ಪತ್ನಿ, ಹೆತ್ತವರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಬಸವರಾಜ್ ಅಗಲಿಕೆಗೆ ಪಬ್ಲಿಕ್ ಟಿವಿ ಸಿಬ್ಬಂದಿ ಕಂಬನಿ ಮಿಡಿದಿದ್ದು, ಮೃತ ಬಸವರಾಜ್ ಕುಟುಂಬಕ್ಕೆ ಪಬ್ಲಿಕ್ ಟಿವಿ ಆಡಳಿತ ಮಂಡಳಿ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

Leave A Reply

Your email address will not be published.