ಮನೆಗೆ ಬೆಂಕಿ ಬಿದ್ದು ಸುಟ್ಟು ಕರಕಲಾದ ಗ್ರಾಮ ಪಂಚಾಯಿತಿ ಸದಸ್ಯ

ಮನೆಗೆ ಬೆಂಕಿ ಬಿದ್ದ ಪರಿಣಾಮ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಸಜೀವ ದಹನ ಆದ ಘಟನೆ ನಡೆದಿದೆ.

 

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು 32 ವರ್ಷ ಪ್ರಾಯದ ಸೋಮಶೇಖರ್ ಶಿವಾನಂದ ಪಾಟೀಲ್ ಎಂದು ಗುರುತಿಸಲಾಗಿದೆ.

ಮೃತರು ಇತ್ತೀಚಿಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದು ಪಂಚಾಯತ್ ಸದಸ್ಯರಾಗಿದ್ದರು.
ನಿಅವರು ನಿನ್ನೆ ರಾತ್ರಿ ಊಟ ಮಾಡಿ ತಮ್ಮ ಮನೆಯಲ್ಲಿ ಮಲಗಿದ್ದರು. ರಾತ್ರಿ ಮನೆಯಲ್ಲಿ ಇವರೊಬ್ಬರೇ ಇದ್ದರು. ಈ ವೇಳೆ ಎಸಿ ಶಾರ್ಟ್ ಸರ್ಕ್ಯೂಟ್ ಆಗಿ ಇಡೀ ಮನೆಗೆ ಬೆಂಕಿ ಆವರಿಸಿದ್ದು, ಸೋಮಶೇಖರ್​ ಸಜೀವ ದಹನ ವಾಗಿದ್ದಾರೆ ಎನ್ನಲಾಗಿದೆ. ಕಾಗವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

Leave A Reply

Your email address will not be published.