ಮತ್ತೊಮ್ಮೆ ಸ್ತಬ್ಧವಾಗಲಿದೆ ಮಹಾರಾಷ್ಟ್ರ : ಮೇ 30 ರವರೆಗೆ ಲಾಕ್ ಡೌನ್ ವಿಸ್ತರಣೆ

ಮುಂಬೈ : ಮಹಾರಾಷ್ಟ್ರ ಸರ್ಕಾರವು ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ಮನಗಂಡು ಈಗಿರುವ ಲಾಕ್ ಡೌನ್ ಅನ್ನು ಮೇ 30ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

 

ಮೇ 16ರಿಂದ ಮೇ 30ವೆರಗೂ ಲಾಕ್​ಡೌನ್ ವಿಸ್ತರಣೆ ಮಾಡಿ ಉದ್ಧವ್ ಠಾಕ್ರೆ ಸರ್ಕಾರ ಸಂಪುಟ ಸಭೆ ಬಳಿಕ ಆದೇಶ ಹೊರಡಿಸಿದೆ. ಈ ಮೂಲಕ ಸತತ ಎರಡು ವಾರಗಳ ಕಾಲ ಮತ್ತೆ ಮಹಾರಾಷ್ಟ್ರ ಸಂಪೂರ್ಣ ಸ್ತಬ್ಧವಾಗಲಿದೆ.

ಸದ್ಯ ಇತ್ತೀಚೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆಯನ್ನು ಗಮನಿಸಿದರೆ ಲಾಕ್ಡೌನ್ ಜಾರಿ ಮಹಾರಾಷ್ಟ್ರದಲ್ಲಿ ಯಶಸ್ವಿಯಾಗಿದೆ ಎಂದು ಹೇಳಬಹುದಾಗಿದೆ. ಆದ್ದರಿಂದ ಸರ್ಕಾರವು ಲಾಕ್ ಡೌನ್ ವಿಸ್ತರಿಸುವ ನಿರ್ಧಾರವನ್ನು ಕೈಗೊಂಡಿದೆ ಎಂದು ಅಭಿಪ್ರಾಯಿಸಲಾಗಿದೆ.

Leave A Reply

Your email address will not be published.