ಅಮೆರಿಕಾದಲ್ಲಿ ಎರಡೂ ಡೋಸ್ ಲಸಿಕೆ ಪಡೆದವರು ಇನ್ನು ಮುಂದೆ ಮಾಸ್ಕ ಧರಿಸುವ ಅಗತ್ಯವಿಲ್ಲ | ಅಮೇರಿಕಾದ ಅಧ್ಯಕ್ಷ ಜೋ ಬೈಡೆನ್ ಹೇಳಿಕೆ

ಅಮೆರಿಕ ಇತರ ದೇಶಗಳಿಗಿಂತ ಅತ್ಯಂತ ಬೇಗ ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಎರಡೂ ಡೋಸ್ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಅಲ್ಲಿನ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಆ್ಯಂಡ್ ಪ್ರಿವೆನ್ಷನ್(ಸಿಡಿಸಿ) ಸ್ಪಷ್ಟಪಡಿಸಿದೆ.

ಇಂದುಗುರುವಾರ ವೈಟ್ ಹೌಸ್‍ನ ರೋಸ್ ಗಾರ್ಡನ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಮಾಸ್ಕ್ ಧರಿಸದೇ ಭಭಾಗವಹಿಸಿ ಅಚ್ಚರಿ ಮೂಡಿಸಿದ್ದಾರೆ.
“ಇದೊಂದು ದೊಡ್ಡ ಅದ್ಭುತ ಮೈಲಿಗಲ್ಲು ಎಂದು ನಾನು ಭಾವಿಸುತ್ತೇನೆ. ಅಸಾಮಾನ್ಯ ಸಾಧನೆಯಿಂದ ಇದು ಸಾಧ್ಯವಾಗಿದೆ. ಅತೀ ವೇಗವಾಗಿ ಅಮೆರಿಕನ್ನರಿಗೆ ನಾವು ಲಸಿಕೆ ನೀಡುತ್ತಿದ್ದೇವೆ ” ಎಂದು ಅಮೆರಿಕಾದ ಅಧ್ಯಕ್ಷ ಜೋ ಬೈಡೆನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಿಡಿಸಿ ವಿವರಿಸಿದ ಇತ್ತೀಚಿನ ಮಾರ್ಗಸೂಚಿಗಳನ್ನು ತಿಳಿಸಿರುವ ಬೈಡೆನ್, ಎರಡೂ ಡೋಸ್ ಲಸಿಕೆ ಪಡೆದವರಿಗೆ ಸೋಂಕು ತಗುಲುವುದು ವಿರಳಾತಿವಿರಳ. ಹೀಗಾಗಿ ನೀವು ಎರಡೂ ಡೋಸ್ ಲಸಿಕೆ ಪಡೆದಿದ್ದರೆ ಇನ್ನು ಮುಂದೆ ಮಾಸ್ಕ್ ಧರಿಸುವ ಅಗತ್ಯವಿಲ್ಲ. ಆದರೆ ಒಂದು ಡೋಸ್ ಪಡೆದು, ಮತ್ತೊಂದು ಡೋಸ್ ಪಡೆಯಲು ಕಾಯುತ್ತಿದ್ದರೆ ಎರಡನೇ ಡೋಸ್ ಲಸಿಕೆ ಪಡೆಯುವವರೆಗೆ ಕಾಯಬೇಕು. ಮತ್ತು ಅಲ್ಲಿಯವರೆಗೆ ಮಾಸ್ಕ್ ಧರಿಸಬೇಕು ಎಂದು ಅವರು ವಿವರಿಸಿದ್ದಾರೆ.

ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರು ಫೆಡರಲ್, ಸ್ಟೇಟ್, ಸ್ಥಳೀಯ ಅಥವಾ ಪ್ರಾದೇಶಿಕ ಕಾನೂನು, ನಿಯಮಗಳು, ಸ್ಥಳೀಯ ವ್ಯವಹಾರ ಹಾಗೂ ಕೆಲಸದ ಮಾರ್ಗಸೂಚಿಗಳು ಸೇರಿದಂತೆ ಅಗತ್ಯ ಸ್ಥಳಗಳಲ್ಲಿ ಹೊರತುಪಡಿಸಿ ಉಳಿದೆಡೆ ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡದೆ ತಮ್ಮ ಕೆಲಸಗಳನ್ನು ನಿರಾತಂಕವಾಗಿ ಮಾಡಬಹುದು ಎಂದು ಸಿಡಿಸಿ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಜಗತ್ತಿನ ಸರ್ವ ಸಂಪನ್ಮೂಲಗಳ ದೈತ್ಯ ರಾಷ್ಟ್ರಅಮೆರಿಕಾವು ತನ್ನ ಲಸಿಕೆ ವಿತರಣೆಯ ವೇಗವನ್ನು ಅಸಮಾನ್ಯ ಎಂದು ಬಣ್ಣಿಸಿದ್ದರೆ, ಇತ್ತ ಭಾರತ ಲಸಿಕೆ ವಿತರಣೆಯಲ್ಲಿ ಅಮೆರಿಕವನ್ನು ಮತ್ತು ಚೀನಾವನ್ನು ಮೀರಿಸಿ ಪ್ರಪಂಚದಲ್ಲಿ ಅತಿ ಕಡಿಮೆ ಸಮಯದಲ್ಲಿ ಅತ್ಯಂತ ಹೆಚ್ಚು ಜನರಿಗೆ ಲಸಿಕೆ ನೀಡಿದ ರಾಷ್ಟ್ರ ವಾಗಿರುವುದನ್ನು ಇಲ್ಲಿ ನಾವು ಸ್ಮರಿಸಬಹುದಾಗಿದೆ.

Leave A Reply

Your email address will not be published.