ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಇಡೀ ಕುಟುಂಬಕ್ಕೆ ಕೊರೋನಾ ಶಾಕ್
ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಇಡೀ ಕುಟುಂಬಕ್ಕೆ ಕೊರೋನಾ ಶಾಕ್ ನೀಡಿದೆ. ಅವರ ಇಡೀ ಕುಟುಂಬದ ಸದಸ್ಯರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಆದರೆ ಮನೆ ಬಿಟ್ಟು ಹೊರಗಡೆ ಸಾರ್ವಜನಿಕವಾಗಿ ಸದಾ ಕೆಲಸದಲ್ಲಿರುವ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಕೊರೋನಾ ಬಾಧಿಸಿಲ್ಲ.
ಸಿಂಧೂರಿ ಅವರ ಪತಿ, ತಂದೆ-ತಾಯಿ ಹಾಗೂ ಅತ್ತೆ-ಮಾವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಹೀಗಾಗಿ ಅವರೆಲ್ಲರೂ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.