ಕರ್ನಾಟಕದಲ್ಲಿ ಮತ್ತೆ ಪಕ್ಕಾ ಲಾಕ್ ಡೌನ್ ? | ಇಂದು ಮಹತ್ವದ ಟಾಸ್ಕ್ ಫೋರ್ಸ್ ಸಭೆ
ಬೆಂಗಳೂರು: ಕೊರೊನಾ ಅಬ್ಬರ ನಿಯಂತ್ರಿಸಲು 2 ತಿಂಗಳ ಕಾಲ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಬೇಕು ಎಂದು ಐಸಿಎಂಆರ್ ಸಲಹೆ ನೀಡಿರುವ ಬೆನ್ನಲ್ಲೇ ಡಿಸಿಎಂ ಅಶ್ವತ್ಥ ನಾರಾಯಣ ನೇತೃತ್ವದಲ್ಲಿ ನಡೆಯುತ್ತಿರುವ ಕೋವಿಡ್ ಟಾಸ್ಕ್ ಫೋರ್ಸ್ ಸಭೆ ಮಹತ್ವ ಪಡೆದುಕೊಂಡಿದೆ.
ವಿಧಾನಸೌಧದಲ್ಲಿ ಟಾಸ್ಕ್ ಫೋರ್ಸ್ ಸಭೆ ಆರಂಭವಾಗಿದ್ದು, ರಾಜ್ಯದಲ್ಲಿ ಕೊರೊನಾ ಆಕ್ಟೀವ್ ಕೇಸ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮ ಹಾಗೂ ಲಾಕ್ ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಐಸಿಎಂಆರ್ ಸೂಚಿಸಿರುವ 6-8 ವಾರಗಳ ಲಾಕ್ ಡೌನ್ ಬಗ್ಗೆಯೂ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಶೇ.10ರಷ್ಟು ಕೋವಿಡ್ ಆಕ್ಟೀವ್ ಕೇಸ್ ಗಳಿರುವ ಜಿಲ್ಲೆಗಳಲ್ಲಿ 2 ತಿಂಗಳ ಲಾಕ್ ಡೌನ್ ಜಾರಿ ಮಾಡಬೇಕು. 3ನೇ ಅಲೆ ತಡೆಯಲು ಲಾಕ್ ಡೌನ್ ಒಂದೇ ಸೂಕ್ತ ಮಾರ್ಗ ಎಂದು ಐಸಿಎಂಆರ್ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಸಲಹೆ ನೀಡಿದೆ. ಡಿಸಿಎಂ ಅಶ್ವತ್ಥ ನಾರಾಯಣ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಭೆ ಆರಂಭವಾಗಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್, ಸುರೇಶ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಪ್ರಸ್ತುತ ಬಂದ ಮಾಹಿತಿ ಪ್ರಕಾರ ಈ ಸಭೆಯಲ್ಲಿ ಲಾಕ್ಡೌನ್ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಕೋವಿಡ್ ಪಾಸಿಟಿವ್ ಪ್ರಕರಣಗಳ ಅಂಕಿ ಅಂಶ ಪಡೆದಿದ್ದು, ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗಿದ್ದು, ಇದಕ್ಕೆ ಟೆಸ್ಟಿಂಗ್ ಪ್ರಮಾಣ ಕಡಿಮೆ ಮಾಡಿದ್ದು ಕಾರಣ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದು, ಟೆಸ್ಟಿಂಗ್ ಪ್ರಮಾಣ ಕಡಿಮೆಯಾಗಿದ್ದು ಕಾರಣವಲ್ಲ ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ಇಂದಿನ ಟಾಸ್ಕ್ ಫೋರ್ಸ್ ಸಮಿತಿಯ ನಿರ್ಧಾರದ ಮೇಲೆ ಏಳು ಕೋಟಿ ಕನ್ನಡಿಗರು ಕಣ್ಣು ನೆಟ್ಟು ಕುಳಿತಿದ್ದಾರೆ.