ಚಂಡ ಮಾರುತ ಪರಿಣಾಮ | ಸಮುದ್ರದಲ್ಲಿ ಹೆಚ್ಚಿದ ಅಬ್ಬರ,ಇನ್ನೂ ಎರಡು ದಿನ ಬರಲಿದೆ ನಿರಂತರ ಮಳೆ

 

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು,ಇದರಿಂದಾಗಿ ಕರಾವಳಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ.

ಕರಾವಳಿ ಜಿಲ್ಲೆಯ ಕೆಲವೆಡೆ ಶುಕ್ರವಾರ ರಾತ್ರಿಯೇ ಮಳೆ ಆರಂಭಗೊಂಡಿದ್ದು, ಶನಿವಾರವೂ ಮುಂದುವರೆದಿದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು ,ಇದರ ಪರಿಣಾಮ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಈಗಾಗಲೇ ಅವರಿಗೆ ಜಿಲ್ಲಾಡಳಿತ,ಕೋಸ್ಟ್‌ಗಾರ್ಡ್ ಮೂಲಕ ಎಚ್ಚರಿಕೆ ನೀಡಲಾಗಿದೆ. ಮುನ್ನೆಚ್ಚರಿಕೆಯಾಗಿ ಎನ್ ಡಿಆರ್ ಎಫ್ ತಂಡ ಜಿಲ್ಲೆಗೆ ಆಗಮಿಸಿದೆ.

ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯ ಕರಾವಳಿ ಭಾಗದಲ್ಲಿ ಇನ್ನೂ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Leave A Reply

Your email address will not be published.