ಎಸ್.ಎಸ್.ಎಲ್.ಸಿ. ದ್ವಿತೀಯ ಪಿಯುಸಿ ಪರೀಕ್ಷೆ ರದ್ದತಿ | ಹೊರಬಿದ್ದಿದೆ ಬಿಗ್ ನ್ಯೂಸ್ !
ರಾಜ್ಯದಲ್ಲಿ ಕೊರೋನಾ ಸೋಂಕಿನ ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ. ದ್ವಿತೀಯ ಪಿಯು ಪರೀಕ್ಷೆ ರದ್ದತಿಯ ಬಗ್ಗೆ ಎದ್ದಿರುವ ಗೊಂದಲಗಳಿಗೆ ಇದೀಗ ತೆರೆಬಿದ್ದಿದೆ.
ಪರೀಕ್ಷೆಗಳನ್ನು ರದ್ದು ಮಾಡುವ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೋವಿಡ್ ತೀವ್ರ ಪ್ರಸರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ-ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ, ಅಂತಹ ಪ್ರಸ್ತಾಪ ಕೂಡ ಸರ್ಕಾರದ ಮುಂದಿಲ್ಲ ಎಂದು ಪ್ರಕಟಿಸಿದ್ದಾರೆ.
ಈಗ ಪ್ರಕಟವಾಗಿರುವ ಸುದ್ದಿ ಕೆಲವು ಮಾಧ್ಯಮಗಳ ಊಹಾಪೋಹವಷ್ಟೇ, ಬೇರೇನೂ ಅಲ್ಲ ಎಂದಿರುವ ಸಚಿವರು, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು.ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವಿಚಲಿತರಾಗದೇ ಓದಿನಲ್ಲಿ ತೊಡಗಿಸಿಕೊಳ್ಳಬೇಕು. ವಿನಾಕಾರಣದ ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ.