ಲಾಕ್ ಡೌನ್ ವಿಸ್ತರಣೆ ಮತ್ತು ಶ್ರಮಿಕ ವರ್ಗಕ್ಕೆ ವಿಶೇಷ ಪ್ಯಾಕೇಜ್ | ಮುಖ್ಯಮಂತ್ರಿಯ ಪತ್ರಿಕಾಗೋಷ್ಠಿಯ ನಂತರ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಅನ್ನು ವಿಸ್ತರಣೆ ಮಾಡಬೇಕಾ ಬೇಡವಾ ಎಂಬ ಸಂಬಂಧ ನಾಳೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಳ್ಳುವ ಎಲ್ಲಾ ಸಾಧ್ಯತೆಯಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಬೆಳಗ್ಗೆ 11.50ಕ್ಕೆ ಪತ್ರಿಕಾಗೋಷ್ಠಿ ಕರೆದಿದ್ದು, ಅದಕ್ಕೂ ಮೊದಲು ಅವರು ಕೊರೋನಾ ನಿಯಂತ್ರಣ ಜವಾಬ್ದಾರಿ ಹೊತ್ತಿರುವ ಸಚಿವರ ಜತೆ ಸಮಾಲೋಚನೆ ನಡೆಸಲಿದ್ದಾರೆ. ನಾಳೆ ಒಂದೋ ಲಾಕ್ ಡೌನ್ ವಿಸ್ತರಣೆ ಅಥವಾ ವಿಶೇಷ ಪ್ಯಾಕೇಜ್ ಘೋಷಣೆ ಎರಡರಲ್ಲಿ ಒಂದು ಆಗುವುದು ಶತಸಿದ್ಧ.
ಲಾಕ್ ಡೌನ್ ವಿಸ್ತರಣೆ, ಅಥವಾ ನಿಯಮಗಳಲ್ಲಿ ಬದಲಾವಣೆ ಇಲ್ಲದಿದ್ದರೆ ವಿಶೇಷ ಪ್ಯಾಕೇಜ್ ಕುರಿತಂತೆ ಸಿಎಂ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.
ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಜವಾಬ್ದಾರಿಯನ್ನು ನೀಡಿ ಆಯಾ ಜಿಲ್ಲೆಗಳಿಗೆ ಲಾಕ್ ಡೌನ್ ಘೋಷಣೆ ಸೇರಿದಂತೆ ಅಗತ್ಯ ಇರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿ ಈಗಾಗಲೇ ಸೂಚನೆ ನೀಡಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಒಂದು ತಿಂಗಳು ಲಾಕ್ ಡೌನ್ ಮಾಡುವಂತೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಒತ್ತಾಯಿಸಿದ್ದು, ಸರ್ಕಾರ ಬಡವರಿಗೆ ವಿಶೇಷ ಪ್ಯಾಕೇಜ್ ಗಳನ್ನು ಘೋಷಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.