Ad Widget

ದ.ಕ.ಜಿಲ್ಲೆಯಲ್ಲಿ ಇಂದು ಕೋವಿಡ್‌ಗೆ 7 ಬಲಿ , 777 ಮಂದಿಗೆ ಪಾಸಿಟಿವ್

ದ.ಕ. ಜಿಲ್ಲೆಯಲ್ಲಿ ಮಂಗಳವಾರ 7 ಮಂದಿ ಕೋವಿಡ್‌ಗೆ ಬಲಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 828ಕ್ಕೇರಿದೆ. ಅಲ್ಲದೆ ಮಂಗಳವಾರ ಜಿಲ್ಲೆಯಲ್ಲಿ 777 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1449 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಜಿಲ್ಲೆಯಲ್ಲಿ ಈವರಗೆ 8,10,123 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,44,215 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 65,908 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 54,098 ಮಂದಿ ಗುಣಮುಖರಾಗಿದ್ದಾರೆ. ಸದ್ಯ 10,982 ಸಕ್ರಿಯ ಪ್ರಕರಣ ವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Ad Widget Ad Widget Ad Widget

Leave a Reply

error: Content is protected !!
Scroll to Top
%d bloggers like this: