ಪುತ್ತೂರು : ಡಿವೈಡರ್ ಗೆ ಕಾರು ಡಿಕ್ಕಿ – ಚಾಲಕ ಬೆಳ್ತಂಗಡಿ ಬಾರ್ಯ ನಿವಾಸಿ ಸಾವು

        

ಪುತ್ತೂರು :ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಬೆಳ್ತಂಗಡಿ ತಾಲೂಕಿನ ಬಾರ್ಯ ನಿವಾಸಿ ಮೃತಪಟ್ಟ ಧಾರುಣ ಘಟನೆ ಪುತ್ತೂರು ಉಪ್ಪಿನಂಗಡಿ ಹೆದ್ದಾರಿಯ ಕೆಮ್ಮಾಯಿ ಎಂಬಲ್ಲಿ ಮೇ 18 ರಂದು ಬೆಳ್ಳಂಬೆಳಗ್ಗೆ ನಡೆದಿದೆ.

ಬೆಳ್ತಂಗಡಿ ಬಾರ್ಯ ನಿವಾಸಿ ಅರುಣ್ ಕುಮಾರ್ ಎಂಬವರು ಮೃತಪಟ್ಟ ಚಾಲಕ. ಅಪಘಾತಕ್ಕಿಡಾದ ಅವರನ್ನು ಕೂಡಲೇ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ.

ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಹುಂಡೈ ಕಂಪೆನಿಯ ಗ್ರ್ಯಾಂಡ್ ಐ -10 ಮಾಡೆಲ್ ಕಾರು ಕೆಮ್ಮಾಯಿ ತಲುಪುತ್ತಿದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಬಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸ್ಥಳೀಯರು ಕೂಡಲೇ ಅಂಬ್ಯುಲೆನ್ಸ್ ಮೂಲಕ ಗಾಯಾಳು ಚಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದರು. ಅಪಘಾತ ನಡೆದ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave A Reply

Your email address will not be published.