ಪಾಸಿಟಿವ್ ಬಂದು ಮನೆಯಲ್ಲಿ ವ್ಯವಸ್ಥೆ ಇಲ್ಲದವರು ಕೋವಿಡ್ ಕೇರ್ ಗೆ ಬನ್ನಿ | ಉಡುಪಿ ಜಿಲ್ಲಾಧಿಕಾರಿ ಹೇಳಿಕೆ
ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಪಾಸಿಟಿವ್ ಪ್ರಮಾಣ ಹೆಚ್ಚಾಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಕಳವಳ ವ್ಯಕ್ತಪಡಿಸಿದ್ದಾರೆ.
ದಿನಕ್ಕೆ 1000-1200 ಪ್ರಕರಣಗಳು ಬರುತ್ತಿವೆ, ಹಾಗೆಯೇ ಪಾಸಿಟಿವಿಟಿ ರೇಟ್ ಕೂಡ ಕಡಿಮೆಯಾಗುತ್ತಿಲ್ಲ, ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಸೋಂಕು ಕಂಡುಬರುತ್ತಿದೆ. ಪಾಸಿಟಿವ್ ಬಂದವರು ಹೊರಗಡೆ ತಿರುಗುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬರುತ್ತಿದೆ. ಪಾಸಿಟಿವ್ ಇದ್ದರೂ ಓಡಾಡುವವರು ಕಂಡು ಬಂದರೆ ಕ್ರಿಮಿನಲ್ ಕೇಸ್ ಹಾಕಲಾಗುವುದು ಹಾಗೂ ಅಂತಹವರನ್ನು ಅಲ್ಲಿಂದಲೇ ಕೋವಿಡ್ ಕೇರ್ ಸೆಂಟರ್ಗೆ ಶಿಫ್ಟ್ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಪಾಸಿಟಿವ್ ಬಂದು ಮನೆಯಲ್ಲಿ ವ್ಯವಸ್ಥೆ ಇಲ್ಲದವರು ದಯವಿಟ್ಟು ಕೋವಿಡ್ ಕೇರ್ ಸೆಂಟರ್ಗೆ ಬನ್ನಿ, ಜಿಲ್ಲೆಯ ಮೂರು ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಇದೆ. ಅಲ್ಲಿ ಬಂದರೆ ನಿಮ್ಮ ಆರೋಗ್ಯ ರಕ್ಷಣೆ ಮಾಡುವ ಜವಾಬ್ದಾರಿ ಜಿಲ್ಲಾಡಳಿತದ್ದು. ಮನೆಯವರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಕೋವಿಡ್ ಕೇರ್ ಸೆಂಟರ್ ಗೆ ಬನ್ನಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿಕೆ ನೀಡಿದ್ದಾರೆ.