ಪುತ್ತೂರು ಸರಕಾರಿ ಆಸ್ಪತ್ರೆಗೆ 1 ರೂ. ಕೋಟಿ ಅನುದಾನದಲ್ಲಿ 450 LPM ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸಂಜೀವ ಮಠಂದೂರು

ಪುತ್ತೂರು:ಅಂತರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದರ ಸಹಭಾಗಿತ್ವದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ರೂ.1 ಕೋಟಿ ಅನುದಾನದಲ್ಲಿ 450 LPM ಸಾಮರ್ಥ್ಯದ ಆಕ್ಸಿಜನ್ ಉತ್ಪಾದನಾ ಘಟಕದ ಕಾಮಗಾರಿಗೆ ಚಾಲನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅವರು ಚಾಲನೆ ನೀಡಿದರು.

ಈ ಮೂಲಕ ಪುತ್ತೂರಿನಲ್ಲಿ ಕೋವಿಡ್ ಸೋಂಕಿತರಿಗೆ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ಕಲ್ಪಿಸುವ ದೃಷ್ಟಿಯಿಂದ ಈ ಆಕ್ಸಿಜನ್ ಘಟಕ ಮಹತ್ತರ ಕೊಡುಗೆಯಾಗಲಿದೆ. ಭವಿಷ್ಯದ ದೃಷ್ಟಿಕೋನ ಇಟ್ಟುಕೊಂಡು ಘಟಕ ನಿರ್ಮಾಣವಾಗಲಿದ್ದು, ಅಭಿವೃದ್ಧಿಯಲ್ಲಿ ದಾಪುಗಾಲಿನ ಹೆಜ್ಜೆ ಇಡುತ್ತಿರುವ ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು ನೇತೃತ್ವದಲ್ಲಿ ಇದೊಂದು ಮಹತ್ತರ ಹೆಜ್ಜೆಯಾಗಿದೆ.ಈಗಾಗಲೇ ಕೋವಿಡ್ ನಿಯಂತ್ರಣ ಕುರಿತು ಪುತ್ತೂರು ಕ್ಷೇತ್ರದಲ್ಲಿ ಕೈಗೊಂಡ ಕಾರ್ಯಗಳು ಎಲ್ಲೆಡೆ ಪ್ರಶಂಸೆಗೆ ಪಾತ್ರವಾಗಿದೆ. ಇಡೀ ರಾಜ್ಯದಲ್ಲಿ ಇದು ಗಮನ ಸೆಳೆದಿದೆ.

ಈ ಸಂದರ್ಭದಲ್ಲಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ, ಪುತ್ತೂರು ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಗೌರಿ, ಪೂಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಕ್ಯಾಂಪ್ಕೋ ನಿರ್ದೇಶಕರುಗಳು, ವೈದ್ಯಾಧಿಕಾರಿಗಳು ಹಾಗೂ ಸ್ಥಳೀಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Leave A Reply

Your email address will not be published.