ರಾಜ್ಯದ ಅರ್ಚಕ ಸಮುದಾಯಕ್ಕೆ ಸಿಹಿ ಸುದ್ದಿ | ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ತಸ್ತಿಕ್, ಸರ್ಕಾರದಿಂದ ಒಟ್ಟು 4.5 ಕೋಟಿ ಬಿಡುಗಡೆ

ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಅರ್ಚಕರಿಗೆ ರಾಜ್ಯ ಇಂದು ಶುಭ ಸುದ್ದಿ ನೀಡಿದೆ.
ರಾಜ್ಯದ ಒಟ್ಟು 50,000 ಅರ್ಚಕರಿಗೆ ಫುಡ್ ಕಿಟ್ ವಿತರಿಸಲು ಮುಜರಾಯಿ ಇಲಾಖೆ ತೀರ್ಮಾನಿಸಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

 

ರಾಜ್ಯದ ಒಟ್ಟು 27,000 ದೇವಾಲಯಗಳ ಅರ್ಚಕರಿಗೆ 3 ತಿಂಗಳುಗಳ ಮುಂಗಡ ತಸ್ತಿಕ್ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಅಲ್ಲದೆ ‘ಸಿ’ ದರ್ಜೆಯ ದೇವಾಲಯಗಳ ಸಿಬ್ಬಂದಿಗಳಿಗೆ ದಿನಸಿ ಕಿಟ್‌ಗಳನ್ನು ಕೂಡ ನೀಡುವಂತೆ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕಾಗಿ ಸರ್ಕಾರ ಒಟ್ಟು 4.50 ಕೋಟಿ ಹಣ ವ್ಯಯಿಸಲಿದೆ.

ಇಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಹೆಚ್.ಎಸ್. ಸಚ್ಚಿದಾನಂದಮೂರ್ತಿ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಜರಾಯಿ ಖಾತೆ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಭೇಟಿ ಮಾಡಿತ್ತು.ಲಾಕ್ ಡೌನ್ ಸಂದರ್ಭದಲ್ಲಿ ಬ್ರಾಹ್ಮಣ ಸಮುದಾಯದ ಬಡ ಅರ್ಚಕರು ಪುರೋಹಿತರು ಮತ್ತು ಅಡುಗೆ ಕೆಲಸದವರಿಗೆ, ಮುಜರಾಯಿ ಇಲಾಖೆಯ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಧನಸಹಾಯ, ದಿನಸಿ ಕಿಟ್ ಗಳನ್ನು ಒದಗಿಸುವ ಬಗ್ಗೆ ಮನವಿ ಪತ್ರ ನೀಡಿತ್ತು. ಅದಕ್ಕೆ ಸರ್ಕಾರ ತಕ್ಷಣ ಸ್ಪಂದಿಸಿದೆ.

Leave A Reply

Your email address will not be published.