ಲಾಕ್ ಡೌನ್ ನ ಭವಿಷ್ಯ ನಾಳೆಯೇ ನಿರ್ಧಾರ | ಮುಖ್ಯ ಮಂತ್ರಿ ಯಡಿಯೂರಪ್ಪ ಹೇಳಿಕೆ

ಮೇ 21 : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಲಾಕ್‌ಡೌನ್ ವಿಸ್ತರಣೆ ಕುರಿತು ನಾಳೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರು ನಾಳೆ ಸಚಿವ ಸಂಪುಟದ ಸಭೆ ಕರೆದಿದ್ದಾರೆ. ಅಲ್ಲದೆ ತಜ್ಞರೊಂದಿಗೆ ನಾಳೆ ಸಮಾಲೋಚನೆ ನಡೆಸಲಿದ್ದಾರೆ. ಆನಂತರ ರಾಜ್ಯದಲ್ಲಿ ಲಾಕ್ ಲಾಕ್‌ಡೌನ್ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಅವರು ಇಂದು ಮಾತನಾಡಿ, ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಲಾಕ್‌ಡೌನ್ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಬಹುಶಃ ನಾಳೆ ಸಂಜೆಯ ಹೊತ್ತಿಗೆ ಲಾಕ್ಡೌನ್ ವಿಸ್ತರಣೆಯ ಕುರಿತು ಕರ್ನಾಟಕದಲ್ಲಿ ಎದ್ದಿರುವ ವ್ಯಾಪಕ ಚರ್ಚೆಗೆ ಒಂದು ಉತ್ತರ ಸಿಗಲಿದೆ.

ಗೃಹಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಿನ್ನೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, 
ಕೊರೋನಾ ಲಾಕ್ ಡೌನ್ ಸಮಯದಲ್ಲಿ ಪೊಲೀಸರು ಮತ್ತು ಗೃಹ ಇಲಾಖೆ ಇನ್ನಷ್ಟು ಕಠಿಣ ನಿಯಮಗಳನ್ನು ಅನುಸರಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದರು.

ಇಡೀ ರಾಜ್ಯ ನಾಳಿನ ಸಚಿವ ಸಂಪುಟ ಸಭೆ ಮತ್ತು ಆನಂತರದ ಮುಖ್ಯಮಂತ್ರಿಗಳ ಹೇಳಿಕೆಗೆ ಕಾಯುತ್ತಿದೆ.

Leave A Reply

Your email address will not be published.