ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರ ಮನೆಗಳು ಇನ್ನು ಮುಂದೆ ಸೀಲ್ ಡೌನ್ ಆಗಲಿವೆ. ಇಂತಹದ್ದೊಂದು ನಿರ್ಧಾರಕ್ಕೆ ಉಡುಪಿ ಜಿಲ್ಲಾಡಳಿತ ಬಂದಿದೆ.
ಉಡುಪಿ ಜಿಲ್ಲೆಯಲ್ಲಿ ಜಾರಿಗೆ ಬರುವ ಈ ಹೊಸ ನಿಯಮದ ಪ್ರಕಾರ ಹೋಂ ಐಸೋಲೇಷನ್ ಇರುವ ಮನೆಗಳಿಗೆ ಪಟ್ಟಿ ಅಳವಡಿಕೆ ಮಾಡಿ ಆ ಮೂಲಕ
ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಈ ಕ್ರಮ ಸಹಕಾರಿಯಾಗಲಿದೆ. ಇದರಿಂದಾಗಿ ಸೋಂಕಿತರ ಚಲನವಲನಗಳ ಮೇಲೆ ತೀವ್ರ ನಿಗಾ ಇರಿಸುವ ಉದ್ದೇಶ ಇದೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.
ಅವರಿಂದಲೇ ಸೀಲ್ ಡೌನ್ ಪ್ರಕ್ರಿಯೆ ಆರಂಭಗೊಂಡಿದ್ದು, ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸೋಂಕಿತರ ಮನೆಗಳನ್ನು ಸೀಲ್ ಡೌನ್ ಮಾಡಲಾಗಿದ್ದು, ಮನೆಯ ಸುತ್ತಮುತ್ತ ಎಚ್ಚರಿಕೆ ಸೂಚಿಸುವ ಬ್ಯಾರಿಕೇಶನ್ ಟೇಪ್ ಕಟ್ಟಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಮಧ್ಯೆ ಉಡುಪಿ ಜಿಲ್ಲಾಧಿಕಾರಿ ಅವರು ಹಳ್ಳಿ ಪ್ರವಾಸ ಕೈಗೊಂಡಿದ್ದು ಮನೆ ಮನೆ ತಲುಪಿ ಜಾಗೃತಿ ಮೂಡಿಸಲು ಪ್ರಯತ್ನಿಸುತ್ತಿದ್ದಾರೆ.
ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆ ಸೀಲ್ ಡೌನ್ ಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಸೋಂಕಿತರ ಓಡಾಟಕ್ಕೆ ಈ ಮೂಲಕ ಕಡಿವಾಣ ಹಾಕಲಾಗುತ್ತಿದೆ.