ಬ್ಲಾಕ್ ಫಂಗಸ್ ನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸುತ್ತಾ ರಾಜ್ಯ ಸರ್ಕಾರ..?

ಬೆಂಗಳೂರು: ದೇಶದ ಹಲವೆಡೆ ಬ್ಲ್ಯಾಕ್ ಫಂಗಸ್ ಸಾಂಕ್ರಾಮಿಕ ರೋಗ ವೇಗವಾಗಿ ಹರಡಿಕೊಳ್ಳುತ್ತಿದ್ದು, ಕೆಲವು ರಾಜ್ಯಗಳು ಕಪ್ಪು ಶಿಲೀಂದ್ರ ಸೋಂಕನ್ನು ಸಾಂಕ್ರಾಮಿಕ ರೋಗ ಎಂದು ಈಗಾಗಲೇ ಘೋಷಣೆ ಮಾಡಿವೆ. ಇದರ ಬೆನ್ನಲ್ಲೇ ಕರ್ನಾಟಕ ಸರ್ಕಾರ ಈ ಸಂಬಂಧ ಏನು ಮಾಡುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.

ರಾಜ್ಯ ಸರ್ಕಾರ ಕಪ್ಪು ಶಿಲೀಂಧ್ರ ಸೋಂಕನ್ನು ಈ ಕೂಡಲೇ ‘ಸಾಂಕ್ರಾಮಿಕ’ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ ಅವರು, ಬ್ಲ್ಯಾಕ್ ಫಂಗಸ್ (ಮ್ಯೂಕರ್‌ ಮೈಕೊಸಿಸ್‌) ಮಾರಕ ಕಾಯಿಲೆಯನ್ನು ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ. ಕೇಂದ್ರ ಸರ್ಕಾರವೂ ಇದನ್ನು ಸಾಂಕ್ರಾಮಿಕ ಎಂದು ಘೋಷಿಸುವಂತೆ ರಾಜ್ಯಗಳಿಗೆ ಸದ್ಯ ಹೇಳಿದೆ. ಅದ್ದರಿಂದ ಕರ್ನಾಟಕ ಸರ್ಕಾರವೂ ಈ ಕುರಿತು ಘೋಷಣೆ ಹೊರಡಿಸಬೇಕೆಂದರು.

ರೋಗದ ತಡೆಗಾಗಿ ತ್ವರಿತ, ಅಗತ್ಯ ಕ್ರಮ ಕೈಗೊಳ್ಳಲು, ಮುಂಚೂಣಿಯಲ್ಲಿ ಹೋರಾಡುವವರನ್ನು ರಕ್ಷಿಸಲು ‘1897ರ ಸಾಂಕ್ರಾಮಿಕ ರೋಗ ತಡೆ ಕಾಯಿದೆ’ಯನ್ನು ಕಪ್ಪು ಶಿಲೀಂಧ್ರ ರೋಗದ ವಿಚಾರದಲ್ಲಿ ಜಾರಿ ಮಾಡಲೇಬೇಕಾಗಿದೆ ಎಂದು ಹೆಚ್.ಡಿ.ಕೆ ಒತ್ತಾಯಿಸಿದ್ದಾರೆ.

ಒಂದೆಡೆ ಕೇಂದ್ರ ಸರ್ಕಾರದ ಸೂಚನೆ ಇನ್ನೊಂದೆಡೆ ರಾಜ್ಯ ವಿರೋಧ ಪಕ್ಷಗಳ ಮುಖಂಡರ ಒತ್ತಾಯದ ಮೇರೆಗೆ ಆದರೂ ಬ್ಲಾಕ್ ಫಂಗಸ್ ನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಸರ್ಕಾರ ಘೋಷಣೆ ಮಾಡುಬಹುದಾ ಎಂದು ಕಾದುನೋಡಬೇಕಾಗಿದೆ.

Leave A Reply

Your email address will not be published.